ಅಧಿಕಾರದಲ್ಲಿ ಇರಲು ಬಿಜೆಪಿಗೆ ನೈತಿಕ ಹಕ್ಕಿಲ್ಲ

7

ಅಧಿಕಾರದಲ್ಲಿ ಇರಲು ಬಿಜೆಪಿಗೆ ನೈತಿಕ ಹಕ್ಕಿಲ್ಲ

Published:
Updated:

ಯಾದಗಿರಿ: ಜನರ ಸಮಸ್ಯೆಗಳಿಗೆ ಸ್ಪಂದಿಸುವುದೇ ಆಡಳಿತ ಪಕ್ಷದ ಆದ್ಯ ಕರ್ತವ್ಯ. ಆದರೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಕಿತ್ತಾಟದಲ್ಲಿಯೇ ಮುಳುಗಿದ್ದು, ಜನರ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದೆ. ಜನರನ್ನೇ ಮರೆತಿರುವ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕು ಕಳೆದುಕೊಂಡಿದೆ ಎಂದು ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ, ಶಾಸಕ ಡಾ.ಎ.ಬಿ. ಮಾಲಕರಡ್ಡಿ ಹೇಳಿದರು.ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಂಗಳವಾರ ಆಯೋಜಿಸಿದ್ದ `ಕಾಂಗ್ರೆಸ್‌ಗೆ ಬನ್ನಿ-ಬದಲಾವಣೆ ತನ್ನಿ~ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಬಿ.ಎಸ್. ಯಡಿಯೂರಪ್ಪ, ತಮ್ಮ ಅವಧಿಯಲ್ಲಿ ರಾಜ್ಯದೆಲ್ಲೆಡೆ 24 ಗಂಟೆ ವಿದ್ಯುತ್ ಮತ್ತು ರೂ. 2 ದರದಲ್ಲಿ ಪಡಿತರ ಚೀಟಿದಾರರಿಗೆ 35 ಕಿ.ಗ್ರಾಂ. ಅಕ್ಕಿ ಕೊಡುವುದು ಸೇರಿದಂತೆ ಹಲವಾರು ಯೋಜನೆಗಳ ಘೋಷಣೆ ಮಾಡಿದ್ದರು.  ಆದರೆ ಈ ಭರವಸೆ ನೀಡಿದ್ದ ಯಡಿಯೂರಪ್ಪ ಈಗ ಎಲ್ಲಿದ್ದಾರೆ ಎಂದು ಪ್ರಶ್ನಿಸಿದರು.ವಚನಭ್ರಷ್ಟರಾಗಿ, ಜೈಲುವಾಸ ಅನುಭವಿಸಿ ಕೊನೆಗೆ ಬಿಜೆಪಿಯಲ್ಲಿ ತಮ್ಮನ್ನು ತಾವು ಉಳಿಸಿಕೊಳ್ಳಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಯಡಿಯೂರಪ್ಪ ಇದ್ದಾರೆ. ಉಳಿದವರೂ ಸಹ ದುರಾಡಳಿತ, ಅಧಿಕಾರ ದಾಹ, ಹಣದ ದಾಹದಲ್ಲಿ ರಾಜ್ಯದ ಜನತೆಯ ಸಮಸ್ಯೆಗಳತ್ತ ಗಮನಹರಿಸಲು ಆಗುತ್ತಿಲ್ಲ. ಇದೆಲ್ಲವನ್ನೂ ಗಮನಿಸುತ್ತಿರುವ ರಾಜ್ಯದ ಜನರು ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.ಶಾಸಕ ಶರಣಬಸಪ್ಪ ದರ್ಶನಾಪುರ ಮಾತನಾಡಿ, ಕೇಂದ್ರ ಸರ್ಕಾರದಿಂದ ಅನೇಕ ಜನಪರ ಯೋಜನೆಗಳನ್ನು ವ್ಯವಸ್ಥಿತ ರೀತಿಯಲ್ಲಿ ನೀಡಲಾಗುತ್ತಿದೆ. ಆದರೆ ಬಿಜೆಪಿ ಸರ್ಕಾರ ಬರಿ ಘೋಷಣೆಗಳ ಸರಮಾಲೆಯೊಂದಿಗೆ ಒಂದೇ ಒಂದು ಯೋಜನೆಯನ್ನು ಜಾರಿಗೆ ತರದೇ ಜನತೆ ವಿಶ್ವಾಸ ಕಳೆದುಕೊಂಡಿದೆ. ರಾಜ್ಯದ ಜನತೆ ಬಿಜೆಪಿಗೆ ಹಿಡಿ ಶಾಪ ಹಾಕುವಂತಾಗಿದೆ ಎಂದು ಕಿಡಿ ಕಾರಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ. ಗೌತಮ, ಜಿಲ್ಲೆಯ ವಿಕ್ಷಕ ಯು.ಭೂಪತಿ ಮಾತನಾಡಿದರು. ಜಿಲ್ಲಾ ಘಟಕದ ಅಧ್ಯಕ್ಷ ಮರಿಗೌಡ ಹುಲಕಲ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಮಧುಸೂದನಗೌಡ ಮಾನಸಗಲ್ ನಿರೂಪಿಸಿದರು. ಸುರೇಶ ಜೈನ್ ವಂದಿಸಿದರು.ಇದೇ ಸಂದರ್ಭದಲ್ಲಿ ದೋರನಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ವಿಧಾನ ಪರಿಷತ್ ಮಾಜಿ ಸದಸ್ಯ ಚೆನ್ನಾರಡ್ಡಿ ಪಾಟೀಲ ತುನ್ನೂರ, ಕೆಪಿಸಿಸಿ ಸದಸ್ಯ ಮೌಲಾಲಿ ಅನಪೂರ, ಬುಚ್ಚಣ್ಣ ಜೈಗ್ರಾಮ್, ಮಲ್ಲಣ್ಣಗೌಡ ಕೌಳೂರು, ಶರಣಪ್ಪಗೌಡ ಮಲ್ಹಾರ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮರೆಮ್ಮ ಶಂಕ್ರಪ್ಪ, ಉಪಾಧ್ಯಕ್ಷ ಶರಣೀಕ್‌ಕುಮಾರ ದೋಖಾ, ಮಹಿಳಾ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷೆ ಮಂಜುಳಾ ಗೂಳಿ, ಚಂದ್ರಶೇಖರ ಅರಬೋಳಿ, ವಿಶ್ವನಾಥ ನೀಲಳ್ಳಿ, ಮಲ್ಲಣ್ಣ ದಾಸನಕೇರಿ, ಸಂಗಾರಡ್ಡಿ ಮಲ್ಹಾರ, ಮಹಿಪಾಲರಡ್ಡಿ ದುಪ್ಪಲ್ಲಿ, ಹಾಜಿ ಶಂಶುಜಾ, ಬಸವರಾಜಪ್ಪ ಸಾಹು, ಸುದರ್ಶನ ನಾಯಕ, ಚಿದಾನಂದಪ್ಪ ಕಾಳೆಬೆಳಗುಂದಿ, ಚಂದಪ್ಪ, ಮರೆಪ್ಪ ಬಿಳ್ಹಾರ, ಶ್ರೀನಿವಾಸರಡ್ಡಿ ಕಂದಕೂರ, ಸಾಯಿಬಣ್ಣ ಬೋರಬಂಡ್, ಅರುಣಕುಮಾರ ಕುಲಕರ್ಣಿ, ದಿನೇಶ ಶರ್ಮಾ, ನಸೀಮಾ ಬೇಗಂ ರಾಜಾಸಾಬ್ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಜರಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry