ಅಧಿಕಾರಿಗಳಿಗೆ ತಲುಪದ ಆದೇಶ

7
ಸ್ಪೀಕರ್‌ ಕಾಗೋಡು ತಿಮ್ಮಪ್ಪ ಅಸಮಾಧಾನ

ಅಧಿಕಾರಿಗಳಿಗೆ ತಲುಪದ ಆದೇಶ

Published:
Updated:

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌­ನಲ್ಲಿ ಪ್ರಕಟಿಸಿದ ಹಲವು ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೆಳಹಂತದ ಅಧಿಕಾರಿಗಳಿಗೆ ಇನ್ನೂ ಆದೇಶ ತಲುಪಿಲ್ಲ ಎಂದು ವಿಧಾನಸಭೆ ಅಧ್ಯಕ್ಷ ಕಾಗೋಡು ತಿಮ್ಮಪ್ಪ ಅಸಮಾಧಾನ ವ್ಯಕ್ತಪಡಿಸಿದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಶನಿವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋ­ಜಿಸಿದ್ದ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯ­ನಿರ್ವಹಣಾ ಅಧಿಕಾರಿಗಳ ಸಮಾ­ವೇಶ ಉದ್ಘಾಟಿಸಿ ಅವರು ಮಾತನಾಡಿ, ಬಜೆಟ್‌ನಲ್ಲಿ ಘೋಷಿಸಿದ ಹಲವು ಕಾರ್ಯಕ್ರಮ­ಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಆದೇಶವೇ ಹೋಗಿಲ್ಲ ಎಂಬ ಮಾಹಿತಿ ತಮಗೆ ಲಭ್ಯವಾಗಿದೆ. ಕೃಷಿ ಇಲಾಖೆಗೆ ಸಂಬಂಧಿ­ಸಿದ ‘ಸ್ವಬೀಜಾಭಿವೃದ್ಧಿ ಯೋಜನೆ’ ಕುರಿತು ವಿಚಾರಿಸಿದಾಗ ಇದು ಗಮನಕ್ಕೆ ಬಂತು ಎಂದರು.‘ಹಲವು ಕಾರ್ಯಕ್ರಮಗಳ ವಿಷಯದಲ್ಲಿ ಇದೇ ರೀತಿ ಆಗಿದೆ. ಎಲ್ಲ ಜನರಿಗೂ ಶುದ್ಧ ಕುಡಿಯುವ ನೀರು ಒದಗಿಸುವ ಕಾರ್ಯಕ್ರಮದ ವಿಚಾರದಲ್ಲಿ ಹೀಗೆ ಆಗಿತ್ತು. ಅಧಿಕಾರಿಗಳನ್ನು ವಿಚಾರಿಸಿದಾಗ ಅವರಿಗೆ ಮಾಹಿತಿಯೇ ಇರಲಿಲ್ಲ. ಈ ಕುರಿತು ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದ ನಾನು, ತಕ್ಷಣವೇ ಕೆಳಹಂತದ ಅಧಿಕಾರಿಗಳಿಗೆ ಆದೇಶ ನೀಡುವ ಮತ್ತು ಮಾಹಿತಿ ಒದಗಿಸುವ ವ್ಯವಸ್ಥೆ ಮಾಡುವಂತೆ ಕೋರಿದ್ದೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry