ಶನಿವಾರ, ಮೇ 28, 2022
26 °C

ಅಧಿಕಾರಿಗಳಿಗೆ ರೈತರಿಂದ ದಿಗ್ಭಂದನ, ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೃಷ್ಣರಾಜಪೇಟೆ :  ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡಲು ಅನಗತ್ಯವಾಗಿ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ ತಾಲ್ಲೂಕು ರೈತ ಸಂಘದ ಕಾರ್ಯಕರ್ತರು ಬುಧವಾರ ಮಿನಿ ವಿಧಾನಸೌಧದ ಬಾಗಿಲಿಗೆ ಅಡ್ಡಲಾಗಿ ಕುಳಿತು, ಅಧಿಕಾರಿಗಳಿಗೆ ದಿಗ್ಭಂದನ ವಿಧಿಸಿ ದಿಢೀರ್ ಪ್ರತಿಭಟನೆ ನಡೆಸಿದರು.ರೈತರು ಮಾರಾಟ ಮಾಡಿರುವ ಭೂಮಿಗಳ ಖಾತೆ ಬದಲಾವಣೆ ಮಾಡುವುದು ಸೇರಿದಂತೆ ಹಲವಾರು ಕೆಲಸಗಳು ಬಾಕಿ ಉಳಿದಿವೆ. ರೈತರು ತಮ್ಮ ಭೂಮಿಯ ಪಹಣಿ ಪತ್ರವನ್ನು ಪಡೆದುಕೊಳ್ಳಲು ದಿನವಿಡೀ ಕಾಯಬೇಕಾದ ಪರಿಸ್ಥಿತಿಯಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.ರೈತಾಪಿ ವರ್ಗದವರ ಮತ್ತು ಸಾರ್ವಜನಿಕರ ಕೆಲಸ ಕಾರ್ಯಗಳು ನಿಗದಿತ ಸಮಯದಲ್ಲಿ ಆಗಬೇಕು ಈ ಕುರಿತು ತಾಲ್ಲೂಕು ದಂಡಾಧಿಕಾರಿಗಳು ಈ ಬಗ್ಗೆ ಹೇಳಿಕೆ ನೀಡಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.ಪಟ್ಟಣ ಪೋಲೀಸ್ ಠಾಣೆ ಸಬ್‌ಇನ್‌ಸ್ಪೆಕ್ಟರ್  ರಂಗಸ್ವಾಮಿ ಮಧ್ಯಸ್ಥಿಕೆಯಲ್ಲಿ, ಆಗಿರುವ ಲೋಪಗಳನ್ನು ಸರಿಪಡಿಸಿ ಎಲ್ಲ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದಾಗಿ ತಹಶೀಲ್ದಾರ್ ಬಿ. ಅಹೋಬಲಯ್ಯ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.