ಅಧಿಕಾರಿಗಳಿಗೆ ವಿವೇಚನೆ ಅಗತ್ಯ

ಗುರುವಾರ , ಮೇ 23, 2019
24 °C

ಫಲಿತಾಂಶ (ಮುನ್ನಡೆ+ಗೆಲುವು) 0/542

ಅಧಿಕಾರಿಗಳಿಗೆ ವಿವೇಚನೆ ಅಗತ್ಯ

Published:
Updated:

ಹಾವೇರಿ: `ಸರ್ಕಾರಿ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ವವಿವೇಚನೆಯಿಂದ ಕೆಲಸ ಮಾಡುವುದರ ಜೊತೆಗೆ ಸಕಾಲಕ್ಕೆ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವ ಬೆಳೆಸಿಕೊಳ್ಳ ಬೇಕೆಂದು ಜಿಲ್ಲಾಧಿಕಾರಿ ಎಚ್.ಜಿ.ಶ್ರೀವರ ಹೇಳಿದರು.ನಗರದ ಜಿಲ್ಲಾ ವಾರ್ತಾ ಭವನದಲ್ಲಿ ಗುರುವಾರ ಬೆಳಗಾವಿ ವಿಭಾಗದ ಅಧಿಕಾರಿ ಹಾಗೂ ಸಿಬ್ಬಂದಿಗೆ ಏರ್ಪಡಿಸಲಾಗಿರುವ ಎರಡು ದಿನಗಳ ಆಡಳಿತ ಪುನರ್‌ಮನನ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.ಸರ್ಕಾರಿ ಸೇವೆ ಸವಾಲಿನ ಕೆಲಸವಾಗಿದೆ. ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಕಾರ್ಯನಿರ್ವಹಣೆಯ ಪೂರ್ವಾಪರಗಳನ್ನು ಸರಿಯಾಗಿ ತಿಳಿದುಕೊಂಡು, ಕಾನೂನಿನ ಪರಧಿಯಲ್ಲಿ ಸರ್ಕಾರ ರೂಪಿಸಿರುವ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ಆಗ ಮಾತ್ರ ಎಲ್ಲ ತರಹದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದರು.ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ ಕುಸುಗಲ್ ಮಾತನಾಡಿ, ಆಡಳಿತದಲ್ಲಿ ಸಿಬ್ಬಂದಿ ಕೊರತೆ ಮಧ್ಯೆಯೂ ತಂತ್ರಜ್ಞಾನದ ಬಳಕೆಯಿಂದ ಸಮರ್ಪಕ ಕೆಲಸ ಮಾಡಲು ಸಾಧ್ಯವಿದೆ. ಹೊಸ ತಂತ್ರಜ್ಞಾನದ ನೆರವು ಪಡೆದು ಸರ್ಕಾರದ ಯೋಜನೆಗಳನ್ನು ಸಕಾಲಕ್ಕೆ ಜನರಿಗೆ ತಲುಪಿಸಲು ಸಿಬ್ಬಂದಿ ಸಜ್ಜುಗೊಳ್ಳಬೇಕು ಎಂದು ತಿಳಿಸಿದರು.ಸಿಬ್ಬಂದಿ ಎಷ್ಟೇ ಓದಿದ್ದರೂ ಕೂಡ ತಾನು ನಿರ್ವಹಿಸುವ ಕೆಲಸದ ಬಗ್ಗೆ ಸರಿಯಾದ ತಿಳುವಳಿಕೆ ಇಲ್ಲದಿದ್ದರೇ, ತನ್ನ ಹುದ್ದೆಗೆ ನ್ಯಾಯ ಒದಗಿಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳು ಸಿಬ್ಬಂದಿಗೆ ಪ್ರೇರಣೆ ನೀಡಬೇಕು ಎಂದು ಸಲಹೆ ಮಾಡಿದರು.ಅಧ್ಯಕ್ಷತೆ ವಹಿಸಿದ್ದ ವಾರ್ತಾ ಇಲಾಖೆ ನಿರ್ದೇಶಕ ಎನ್.ಆರ್.ವಿಶುಕುಮಾರ ಮಾತನಾಡಿ, ಸರ್ಕಾರದ ಬಹುತೇಕ ಇಲಾಖೆಗಳು ಒಂದಿಲ್ಲೊಂದು ಸಂಪನ್ಮೂಲದ ಕೊರತೆ ಅನುಭವಿಸುತ್ತಿವೆ. ಲಭ್ಯವಿರುವ ಮಾನವ ಸಂಪನ್ಮೂಲವನ್ನು ಸದ್ಬಳಕೆ ಮಾಡಿಕೊಂಡು ಸರ್ಕಾರದ ಆಶಯಗಳ ಈಡೇರಿಕೆಗೆ ಶ್ರಮಿಸಬೇಕು ಎಂದರು. ವಾರ್ತಾ ಇಲಾಖೆ ಸಿಬ್ಬಂದಿಯ ನೈಪುಣ್ಯತೆಯನ್ನು ಬಳಸಿಕೊಳ್ಳು ಉದ್ದೇಶದಿಂದ ಇಂತಹ ತರಬೇತಿಗಳನ್ನು ಮೈಸೂರು, ಬೆಂಗಳೂರು ಹಾಗೂ ಗುಲ್ಬರ್ಗಾ ವಿಭಾಗಗಳಲ್ಲಿ ಆಯೋಜಿಸಲಾಗುತ್ತಿದೆ  ಎಂದರು.ಇದೇ ಸಂದರ್ಭದಲ್ಲಿ ಡಿಡಿಪಿಐ ಕಚೇರಿ ವ್ಯವಸ್ಥಾಪಕ ಎ.ಎಂ.ನೀಲಕಂಠಪ್ಪ, ವಾರ್ತಾ ಇಲಾಖೆ ಕೇಂದ್ರ ಕಚೇರಿಯ ಸಹಾಯಕ ಆಡಳಿತಾಧಿಕಾರಿ ಚಂದ್ರಪ್ಪ, ಅಧೀಕ್ಷಕ ಶಿವಣ್ಣ ವಕ್ಕರ, ಎ.ಸಿ.ತಿಪ್ಪೇಸ್ವಾಮಿ, ಜಯಂತ ಅವರು ಆಡಳಿತ ಕಾರ್ಯ ವಿಧಾನ ವಿಷಯ ಕುರಿತು ಮಾತನಾಡಿದರು.ಧಾರವಾಡ ವಾರ್ತಾ ಕಚೇರಿ ಹಿರಿಯ ಸಹಾಯಕ ನಿರ್ದೇಶಕ ಪಿ.ಎಸ್.ಹಿರೇಮಠ, ವಿಜಾಪುರ ವಾರ್ತಾಧಿಕಾರಿ ಡಾ.ರಂಗನಾಥ ಸೇರಿದಂತೆ ವಿಭಾಗದ ಏಳು ಜಿಲ್ಲೆಗಳ  ಅಧಿಕಾರಿ ಹಾಗೂ ಸಿಬ್ಬಂದಿ ಶಿಬಿರದಲ್ಲಿ ಪಾಲ್ಗೊಂಡಿದ್ದರು.

ಬಸವರಾಜ ಕಂಬಿ ಸ್ವಾಗತಿಸಿದರು. ಪ್ರಹ್ಲಾದ್ ಪರ್ವತಿ ನಿರೂಪಿಸಿದರು. ಸಿ.ಪಿ.ಮಾಯಾಚಾರಿ ವಂದಿಸಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry