ಭಾನುವಾರ, ನವೆಂಬರ್ 17, 2019
29 °C

ಅಧಿಕಾರಿಗಳು ಚುರುಕಿನಿಂದ ಕೆಲಸ ಮಾಡಬೇಕು

Published:
Updated:

ಬಳ್ಳಾರಿ: ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳ್ನು ತಲುಪಿಸಲು ಅಧಿಕಾರಿಗಳು ಚುರುಕಿನಿಂದ ಕೆಲಸ ಮಾಡಬೇಕು ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಸೂಚಿಸಿದರು.ನಗರದಲ್ಲಿ ಭಾನುವಾರ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಜನರಿಗಾಗಿ ಏರ್ಪಡಿಸಲಾಗಿದ್ದ `ನಿಮ್ಮಂದಿಗೆ ನಾವು~ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಜನಪರ ಕಾರ್ಯಕ್ರಮಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಲು ಶ್ರಮಿಸುವುದಲ್ಲದೆ, ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ, ಮಧ್ಯವರ್ತಿಗಳನ್ನು ನಿಯಂತ್ರಿಸುವ ಜವಬ್ದಾರಿ ಅಧಿಕಾರಿಗಳದ್ದು ಎಂದು ಅವರು ತಿಳಿಸಿದರು.ಸರ್ಕಾರದ ವಿವಿಧ ಯೋಜನೆಗಳು ವಿವಿಧ ಹಂತಗಳಲ್ಲಿ ಅರ್ಧಕ್ಕೇ ನಿಂತಿರುವುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಸಚಿವ ಜನಾರ್ದನರೆಡ್ಡಿ ಅವರು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಮನವಿಗಳಿಗೆ ಅಧಿಕಾರಿಗಳು ಆದ್ಯತೆ ನೀಡಿ ಸಮಸ್ಯೆಗಳ ಪರಿಹಾರಕ್ಕೆ ಯತ್ನಿಸಬೇಕು ಎಂದು ಅವರು ಸೂಚಿಸಿದರು.ಜಿಲ್ಲಾ ಉಸ್ತುವಾರಿ ಸಚಿವ ಜಿ.ಜನಾರ್ದನರೆಡ್ಡಿ, ಶಾಸಕ ಸುರೇಶ ಬಾಬು, ಜಿ.ಪಂ. ಅಧ್ಯಕ್ಷೆ ಅರುಣಾ, ಬುಡಾ ಅಧ್ಯಕ್ಷ ಗುರುಲಿಂಗನಗೌಡ, ಮೇಯರ್ ಪಾರ್ವತಿ, ಜಿಲ್ಲಾಧಿಕಾರಿ ಎ.ಎ. ಬಿಸ್ವಾಸ್, ಪೊಲೀಸ್ ವರಿಷ್ಠಾಧಿಕಾರಿ ಡಾ.ಚಂದ್ರಗುಪ್ತ, ಮತ್ತಿತರರು ಉಪಸ್ಥಿತರಿದ್ದರು.

ಪ್ರತಿಕ್ರಿಯಿಸಿ (+)