ಅಧಿಕಾರಿಗಳು ತನಿಖೆಗೆ ಸಹಕರಿಸಲಿ

7

ಅಧಿಕಾರಿಗಳು ತನಿಖೆಗೆ ಸಹಕರಿಸಲಿ

Published:
Updated:

ಬೆಂಗಳೂರು: ಆಂಧ್ರಪ್ರದೇಶದಲ್ಲಿ ನಡೆದ ಅಕ್ರಮ ಗಣಿಗಾರಿಕೆ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ತಂಡಕ್ಕೆ ಆ ರಾಜ್ಯದ ಐಎಎಸ್ ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡಬೇಕು ಎಂದು ಎಐಸಿಸಿ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ ವಿ. ಹನುಮಂತರಾವ್ ಆಗ್ರಹಿಸಿದರು.`ಆಂಧ್ರಪ್ರದೇಶದ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಅವರನ್ನು ಇತ್ತೀಚೆಗೆ ಭೇಟಿ ಮಾಡಿರುವ ಐಎಎಸ್ ಅಧಿಕಾರಿಗಳು ಅಕ್ರಮ ಗಣಿಗಾರಿಕೆ ಕುರಿತ ತನಿಖೆಯಿಂದ ತಮ್ಮನ್ನು ಹೊರಗಿಡಬೇಕು ಎಂಬ ಬೇಡಿಕೆ ಇಟ್ಟಿರುವುದು ಸರಿಯಲ್ಲ. ಅಧಿಕಾರಿಗಳು ತನಿಖಾ ತಂಡಕ್ಕೆ ಸಂಪೂರ್ಣ ಸಹಕಾರ ನೀಡಬೇಕು~ ಎಂದು ಹನುಮಂತರಾವ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.ರಾಜ್ಯ ವಿಧಾನಸಭೆಗೆ ಯಾವುದೇ ಸಂದರ್ಭ ಚುನಾವಣೆ ಎದುರಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಚುನಾವಣಾ ಸಿದ್ಧತೆ ಆರಂಭಿಸಿದೆ. ಪಕ್ಷದ ಕಾರ್ಯಕರ್ತರನ್ನು ಸಂಘಟಿಸುವ ಉದ್ದೇಶದಿಂದ ಬಳ್ಳಾರಿ, ಕೊಪ್ಪಳ ಮತು ಗದಗ ಜಿಲ್ಲಾ ಪ್ರವಾಸ ಸೋಮವಾರದಿಂದ ಆರಂಭವಾಗಲಿದೆ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry