ಸೋಮವಾರ, ಮೇ 23, 2022
24 °C

ಅಧಿಕಾರಿಗಳ ಅಕ್ರಮ: ಎರಡು ವಾರಗಳಲ್ಲಿ ಬಿಬಿಎಂಪಿ ವರದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳು ಹಾಗೂ ಹಿಂದುಳಿದ ವರ್ಗಗಳ ಯುವಕ, ಯುವತಿಯರಿಗೆ ಕಂಪ್ಯೂಟರ್ ತರಬೇತಿ ನೀಡುವ ಯೋಜನೆಯಲ್ಲಿ ಅಕ್ರಮ ಎಸಗಿರುವವರ ವಿರುದ್ಧ ಕ್ರಮ ಕೈಗೊಳ್ಳದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಎರಡು ವಾರದಲ್ಲಿ ವರದಿ ಸಲ್ಲಿಸುವುದಾಗಿ ಬಿಬಿಎಂಪಿ ಸೋಮವಾರ ಹೈಕೋರ್ಟ್‌ಗೆ ತಿಳಿಸಿದೆ.ಕಂಪ್ಯೂಟರ್ ತರಬೇತಿ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಅಕ್ರಮ ಎಸಗಿರುವ ಕುರಿತು ತನಿಖೆ ನಡೆಸಿದ್ದ ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್) 2009ರಲ್ಲೇ ವರದಿ ಸಲ್ಲಿಸಿದ್ದರೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಪಾಲಿಕೆಯ ನಿಲುವು ಪ್ರಶ್ನಿಸಿ ಶಿವಾನಂದ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.ಮಾರ್ಚ್ 14ರಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಬಿಬಿಎಂಪಿಗೆ ಎರಡು ವಾರದ ಗಡುವು ನೀಡಿತ್ತು. ಬಿಎಂಟಿಎಫ್ ವರದಿ ನಂತರವೂ ಮೌನ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಸಂಬಂಧ ವರದಿ ಸಲ್ಲಿಸುವುದಾಗಿ ಪಾಲಿಕೆ ಸೋಮವಾರ ಹೈಕೋರ್ಟ್‌ಗೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.