ಗುರುವಾರ , ಮೇ 19, 2022
19 °C

ಅಧಿಕಾರಿಗಳ ಜತೆ ಸಚಿವರ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಕ್ಸಲ್ ನಿಗ್ರಹ ಪಡೆ ಮತ್ತು ಕರಾವಳಿ ಕಾವಲು ಪಡೆಯನ್ನು ಬಲಪಡಿಸುವ ಸಂಬಂಧ ಗೃಹ ಸಚಿವ ಆರ್.ಅಶೋಕ ಅವರು ಶುಕ್ರವಾರ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.ಸಮುದ್ರದ ಮೂಲಕ ಅಕ್ರಮ ಒಳ ನುಸುಳುವಿಕೆ ಮತ್ತು ಕಳ್ಳ ಸಾಗಾಣಿಕೆಯನ್ನು ತಡೆಯುವ ಉದ್ದೇಶದಿಂದ ಕರಾವಳಿ ಕಾವಲು ಪಡೆಗೆ ಹೆಚ್ಚಿನ ಶಕ್ತಿ ತುಂಬುವ ಬಗ್ಗೆ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ.ಕರಾವಳಿ ಭಾಗದಲ್ಲಿ ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸಿಬ್ಬಂದಿಗೆ ಹೆಚ್ಚಿನ ತರಬೇತಿ ನೀಡುವ ಹಾಗೂ ಶಸ್ತ್ರಾಸ್ತ್ರಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಪ್ರಸ್ತಾಪವಾಯಿತು. ನಕ್ಸಲ್‌ಪೀಡಿತ ಪ್ರದೇಶಗಳಲ್ಲಿ ನಕ್ಸಲರ ಚಟುವಟಿಕೆಗಳನ್ನು ನಿಗ್ರಹಿಸಲು ಪೊಲೀಸರಿಗೆ ಹೆಚ್ಚಿನ ತರಬೇತಿ ನೀಡುವ ಕುರಿತೂ ಚರ್ಚೆ ನಡೆಯಿತು ಎನ್ನಲಾಗಿದೆ.ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಬರುವ ನಕ್ಸಲರಿಗೆ ಜೀವನೋಪಾಯಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಅಶೋಕ ಸೂಚಿಸಿದರು. ಗೃಹ ಇಲಾಖೆ ಕಾರ್ಯದರ್ಶಿ ವಿ.ಉಮೇಶ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಲಾಲ್ ರುಕುಂ ಪಚಾವೊ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.