ಅಧಿಕಾರಿಗಳ ವರ್ಗಾವಣೆ

ಮಂಗಳವಾರ, ಜೂಲೈ 16, 2019
25 °C

ಅಧಿಕಾರಿಗಳ ವರ್ಗಾವಣೆ

Published:
Updated:

ಬೆಂಗಳೂರು: ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ತಮ್ಮ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಲಿದ್ದು, ಅದಕ್ಕೂ ಮುನ್ನ ತಮ್ಮ  ಪ್ರಧಾನ ಕಾರ್ಯದರ್ಶಿ ಸೇರಿದಂತೆ ಒಟ್ಟು ನಾಲ್ಕು ಮಂದಿ ಹಿರಿಯ ಅಧಿಕಾರಿಗಳನ್ನು ಬೇರೆ ಇಲಾಖೆಗಳಿಗೆ ವರ್ಗಾವಣೆ ಮಾಡಿದ್ದಾರೆ.ಹಿರಿಯ ಐಎಎಸ್ ಅಧಿಕಾರಿಯೂ ಆದ ಮುಖ್ಯಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ಐ.ಎಸ್.ಎನ್ ಪ್ರಸಾದ್ ಮತ್ತು ಜಂಟಿ ಕಾರ್ಯದರ್ಶಿ ವಿ.ಯಶವಂತ್ ಅವರನ್ನು ಸೋಮವಾರ ವರ್ಗಾವಣೆ ಮಾಡಲಾಗಿದೆ.ಪ್ರಸಾದ್ ಅವರನ್ನು ಐ.ಟಿ/ಬಿ.ಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಯಶವಂತ ಅವರನ್ನು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.ಪ್ರಸಾದ್ ಅವರು ಮಧ್ಯಾಹ್ನವೇ ಅಧಿಕಾರ ವಹಿಸಿಕೊಂಡಿದ್ದಾರೆ. ಈ ವಿಷಯ ಶೆಟ್ಟರ್ ಅವರಿಗೆ ತಿಳಿದು, ಈ ತಿಂಗಳ ಅಂತ್ಯದವರೆಗೆ ಈಗಿನ ಹುದ್ದೆಯಲ್ಲೇ ಮುಂದುವರೆಯುವಂತೆ ಸೂಚಿಸಿದ್ದಾರೆ ಎಂದು ಗೊತ್ತಾಗಿದೆ.ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿಯಾಗಿದ್ದ ಡಾ.ಕೆ.ಎ.ಅಪ್ಪಯ್ಯ ಅವರನ್ನು ಬೆಂಗಳೂರಿನ ಹೆಚ್ಚುವರಿ ಪ್ರಾದೇಶಿಕ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಮುಖ್ಯಮಂತ್ರಿಯವರ ಉಪ ಕಾರ್ಯದರ್ಶಿಯಾಗಿದ್ದ ಕೆಂಪೇಗೌಡ ಅವರನ್ನು ಅಂಗವಿಕಲ ನಿರ್ದೇಶನಾಲಯದ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಅಧಿಕಾರಿಗಳ ಕೋರಿಕೆ ಮೇರೆಗೆ ಈ ವರ್ಗಾವಣೆ ಮಾಡಲಾಗಿದೆ ಎಂದು ಗೊತ್ತಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry