ಅಧಿಕಾರಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

7

ಅಧಿಕಾರಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

Published:
Updated:

ಚಿಕ್ಕಬಳ್ಳಾಪುರ: ಅಧಿಕಾರಿಗಳು ಯಾವುದೇ ಕಾರಣಕ್ಕೂ ಕೆಲಸಕಾರ್ಯಗಳಲ್ಲಿ ವಿಳಂಬ ತೋರ ಬಾರದು. ಕರ್ತವ್ಯ ನಿರ್ಲಕ್ಷ್ಯ ತೋರಿದ್ದಲ್ಲಿ, ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎ.ನಾರಾಯಣಸ್ವಾಮಿ ಎಚ್ಚರಿಕೆ ನೀಡಿದರು.ಬರಗಾಲಕ್ಕೆ ಸಂಬಂಧಿಸಿದಂತೆ ಆಗಿರುವ ಪ್ರಗತಿ ಬಗ್ಗೆ ಪರಿಶೀಲನೆ ನಡೆಸಲು ಸೋಮವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿ ಶೀಲನಾ ಸಭೆಯಲ್ಲಿ ಮಾತಮಾಡಿದ ಅವರು, `ಅಧಿಕಾರಿಗಳು ಕೆಲಸಕಾರ್ಯಗಳತ್ತ ನಿರ್ಲಕ್ಷ್ಯ, ನಿರಾಸಕ್ತಿ ತೋರುತ್ತಿರುವುದು ಗಮನಕ್ಕೆ ಬಂದಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ~ ಎಂದರು.`ಜಿಲ್ಲಾ ಮತ್ತು ತಾಲ್ಲೂಕುಮಟ್ಟದ ಪ್ರಗತಿ ಪರಿಶೀಲನಾ ಸಭೆಗಳಿಗೆ ಗೈರುಹಾಜರಾಗುತ್ತಿರುವ ಅಧಿಕಾರಿಗಳು ಅಭಿವೃದ್ಧಿಯತ್ತ ಹೆಚ್ಚಿನ ಆಸಕ್ತಿ ತೋರುತ್ತಿಲ್ಲ. ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಬರುವ ಅನು ದಾನವನ್ನು ಸದ್ಬಳಕೆ ಮಾಡಿಕೊಳ್ಳುತ್ತಿಲ್ಲ. ಶಾಸ ಕರು ಸೇರಿದಂತೆ ಜನಪ್ರತಿನಿಧಿಗಳ ಮಾತುಗಳಿಗೆ ಮತ್ತು ದೂರುಗಳಿಗೆ ಸ್ಪಂದಿಸುತ್ತಿಲ್ಲ. ಅಧಿಕಾರಿ ಗಳು ತಮ್ಮ ಕರ್ತವ್ಯ ಮರೆಯುತ್ತಿರುವ ಕಾರಣ ದಿಂದಲೇ ಜಿಲ್ಲೆಗೆ ಹಿನ್ನಡೆಯಾಗುತ್ತಿದೆ~ ಎಂದು ಅವರು ಆರೋಪಿಸಿದರು.`ಜನಪ್ರತಿನಿಧಿಗಳು ಮತ್ತು ಜನರ ನಡುವೆ ಸಂಪರ್ಕ ಕೊಂಡಿಯಾಗಿರುವ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವ ಹಿಸಬೇಕು. ಜನರು ಎದುರಿಸುತ್ತಿರುವ ಸಮಸ್ಯೆ ಗಳನ್ನು ತಕ್ಷಣವೇ ಪರಿಹರಿಸಲು ಮುಂದಾ ಗಬೇಕು.ಗ್ರಾಮೀಣ ಪ್ರದೇಶದಲ್ಲಿ ಸಮಸ್ಯೆಗಳು ತೀವ್ರ ಸ್ವರೂಪದಲ್ಲಿದ್ದು, ಅವುಗಳನ್ನು ಪರಿಹರಿ ಸುವತ್ತ ಕಾರ್ಯಪ್ರವೃತ್ತರಾಗಬೇಕು. ಯಾವುದೇ ಕಾರಣಕ್ಕೂ ಸೋಮಾರಿತನ ಮತ್ತು ನಿರ್ಲಕ್ಷ್ಯತನ ತೋರಬಾರದು~ ಎಂದು ಅವರು ಸೂಚಿಸಿದರು.ತಾವು ಕೇಳಿದ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡದ ಅಧಿಕಾರಿಗಳನ್ನು ನಾರಾಯಣಸ್ವಾಮಿ ತರಾಟೆ ತೆಗೆದುಕೊಂಡರು. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, ವಿದ್ಯುತ್ ಸಂಪರ್ಕ, ನೀರು ಪೂರೈಕೆ ಸೇರಿದಂತೆ ವಿವಿಧ ವಿಷಯಗಳನ್ನು ಚರ್ಚಿಸಲಾಯಿತು.ಶಾಸಕರಾದ ಕೆ.ಪಿ.ಬಚ್ಚೇಗೌಡ,  ಡಾ.ಎಂ.ಸಿ. ುಧಾಕರ, ಎನ್.ಸಂಪಂಗಿ ಮತ್ತು ವಿ.ಮುನಿಯಪ್ಪ ಅವರು ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆಗಳನ್ನು ಪರಿಹರಿಸುವಂತೆ ಸಚಿವರಲ್ಲಿ ಮನವಿ ಮಾಡಿದರು.ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ವಿ.ಕೃಷ್ಣಪ್ಪ, ಉಪಾಧ್ಯಕ್ಷೆ ಬಿ.ಸಾವಿತ್ರಮ್ಮ, ಜಿಲ್ಲಾಧಿಕಾರಿ ಡಾ. ಎನ್.ಮಂಜುಳಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎಸ್.ಶೇಖರಪ್ಪ ಸಭೆಯಲ್ಲಿ ಇತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry