ಬುಧವಾರ, ಜೂನ್ 23, 2021
30 °C

ಅಧಿಕಾರಿ ಹತ್ಯೆ: ಸಿಬಿಐ ತನಿಖೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭೋಪಾಲ್(ಐಎಎನ್‌ಎಸ್): ಐಪಿಎಸ್ ಅಧಿಕಾರಿ ನರೇಂದ್ರ ಕುಮಾರ್ ಸಿಂಗ್ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವುದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮಂಗಳವಾರ ತಿಳಿಸಿದ್ದಾರೆ.

ಗಣಿ ಮಾಫಿಯಾದವರಿಂದ ಹತ್ಯೆಗೊಳಗಾದ ನರೇಂದ್ರ ಅವರ ಕುಟುಂಬ ಹಾಗೂ ವಿರೋಧಪಕ್ಷಗಳು ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಈ ಮೊದಲು ನರೇಂದ್ರ ಹತ್ಯೆಗೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿತ್ತು.

ಶ್ರೀ ಸಾಯಿಬಾಬಾ ಟ್ರಸ್ಟ್ ಸದಸ್ಯರ ವಜಾ

ಶಿರಡಿ, ಮಹಾರಾಷ್ಟ್ರ (ಐಎಎನ್‌ಎಸ್): ಶಿರಡಿಯಲ್ಲಿಯ ಶ್ರೀ ಸಾಯಿಬಾಬಾ ಸಂಸ್ಥಾನ ಟ್ರಸ್ಟ್‌ನ 18 ಸದಸ್ಯರನ್ನು ಬಾಂಬೈ ಹೈಕೋರ್ಟ್ ವಜಾ ಮಾಡಿರುವುದರಿಂದ ಮಹಾರಾಷ್ಟ್ರ ಸರ್ಕಾರಕ್ಕೆ ಭಾರಿ ಮುಖಭಂಗವಾಗಿದೆ. ಇನ್ನು 15 ದಿನಗಳ ಒಳಗಾಗಿ ಹೊಸ ಸಮಿತಿಯನ್ನು ರಚಿಸಬೇಕು, ತಪ್ಪಿದಲ್ಲಿ ಜಿಲ್ಲಾಧಿಕಾರಿ ಮತ್ತು ಇತರ ಅಧಿಕಾರಿಗಳು ಟ್ರಸ್ಟ್‌ನ ಅಧಿಕಾರ ವಹಿಸಿಕೊಳ್ಳಬೇಕಾಗುತ್ತದೆ ಎಂದು ಬಾಂಬೈ ಹೈಕೋರ್ಟ್‌ನ ಔರಂಗಾಬಾದ್ ಪೀಠವು ಆದೇಶಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.