ನವದೆಹಲಿ: ಮುಖ್ಯಮಂತ್ರಿ ಅಧಿಕಾರ ದುರುಪಯೋಗ ಮಾಡಿಕೊಂಡು ಗಣಿಗಾರಿಕೆ ಪರವಾನಗಿ ನವೀಕರಿಸಿದ ಹಾಗೂ ವಿಶ್ವಭಾರತಿ ಗೃಹ ನಿರ್ಮಾಣ ಸಂಘಕ್ಕೆ ಗುಂಪು ನಿವೇಶನ ಮಂಜೂರು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಉತ್ತರಿಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರಿಗೆ ಸುಪ್ರೀಂ ಕೋರ್ಟ್ ಇನ್ನೂ ನಾಲ್ಕು ವಾರ ಕಾಲಾವಕಾಶ ನೀಡಿದೆ.

ವಕೀಲ ಎಂ. ವಿನೋದ ಕುಮಾರ್ ಅವರು ಸಲ್ಲಿಸಿರುವ ವಿಶೇಷ ಮೇಲ್ಮನವಿಗೆ ಸಂಬಂಧಿಸಿದಂತೆ ಉತ್ತರಿಸಲು ಕಾಲಾವಕಾಶ ಕೋರಿದ ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಅವರ ವಕೀಲ ಪ್ರಶಾಂತ್ ಕುಮಾರ್ ಮನವಿಯನ್ನು ನ್ಯಾ. ಅಫ್ತಾಬ್ ಆಲಂ ಹಾಗೂ ನ್ಯಾ. ರಂಜನ್ ಪ್ರಕಾಶ್ ದೇಸಾಯಿ ಅವರನ್ನು ಒಳಗೊಂಡ ನ್ಯಾಯಪೀಠ ಗುರುವಾರ ಮಾನ್ಯ ಮಾಡಿತು.

ಕುಮಾರಸ್ವಾಮಿ ದಂಪತಿ ಮೇಲೆ ಕಾನೂನು ಪ್ರಕ್ರಿಯೆ ಆರಂಭಿಸಲು ಮುಂದಾಗಿದ್ದ ಲೋಕಾಯುಕ್ತ ನ್ಯಾಯಾಲಯದ ಕ್ರಮವನ್ನು ರದ್ದುಗೊಳಿಸಿದ ರಾಜ್ಯ ಹೈಕೋರ್ಟ್ನ ಅಕ್ಟೋಬರ್ 21ರ ಆದೇಶವನ್ನು ವಿನೋದ ಕುಮಾರ್ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದಾರೆ.

ಕಾನೂನು ಮೀರಿ `ಜಂತಕಲ್~ ಗಣಿ ಕಂಪೆನಿಗೆ ಪರವಾನಗಿ ನವೀಕರಿಸಿದ ಹಾಗೂ ವಿಶ್ವಭಾರತಿ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಗುಂಪು ನಿವೇಶನ ಮಂಜೂರು ಮಾಡಿ ಪ್ರತಿಯಾಗಿ ಪತ್ನಿ ಅನಿತಾ ಅವರ ಹೆಸರಿಗೆ ಎರಡು ನಿವೇಶನಗಳನ್ನು ಪಡೆದ ಆರೋಪ ಕುಮಾರಸ್ವಾಮಿ ಅವರ ಮೇಲಿದೆ. 2006ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ಈ ಕಾನೂನು ಬಾಹಿರ ತೀರ್ಮಾನ ಮಾಡಿದ್ದಾರೆ ಎಂದು ವಿಶೇಷ ಮೇಲ್ಮನವಿಯಲ್ಲಿ ದೂರಲಾಗಿದೆ.

`ಮಾಜಿ ಮುಖ್ಯಮಂತ್ರಿ ಹಾಗೂ ಅವರ ಪತ್ನಿ ವಿರುದ್ಧ ಹೂಡಿರುವ ಮೊಕದ್ದಮೆ ರಾಜಕೀಯ ದುರುದ್ದೇಶದಿಂದ ಕೂಡಿದೆ~ ಎಂದು ಹೇಳಿ ಲೋಕಾಯುಕ್ತ ನ್ಯಾಯಾಲಯ ಆರಂಭಿಸಿದ್ದ ಕಾನೂನು ಪ್ರಕ್ರಿಯೆ ರದ್ದುಗೊಳಿಸಿದ ಹೈಕೋರ್ಟ್, ಅರ್ಜಿದಾರ ವಿನೋದ್ ಕುಮಾರ್ಗೆ ಒಂದು ಲಕ್ಷ ರೂಪಾಯಿ ದಂಡ ಹಾಕಿತ್ತು.

ಮಾಧ್ಯಮ-ವಕೀಲರ ಮಾರಾಮಾರಿ ಪ್ರಕರಣ: ಬೆಂಗಳೂರಿನ ನ್ಯಾಯಾಲಯ ಆವರಣದಲ್ಲಿ ಮಾರ್ಚ್ 2ರಂದು ವಕೀಲರು, ಮಾಧ್ಯಮ ಪ್ರತಿನಿಧಿಗಳು ಮತ್ತು ಪೊಲೀಸರ ನಡುವೆ ನಡೆದ ಮಾರಾಮಾರಿ ಘಟನೆಯ ತನಿಖೆಗೆ ಹೈಕೋರ್ಟ್ ಆದೇಶದಂತೆ ರಚಿಸಲಾದ ವಿಶೇಷ ತಂಡದ ಕುರಿತು ವಿವರಣೆ ನೀಡುವಂತೆ ಸುಪ್ರೀಂಕೋರ್ಟ್ ಗುರುವಾರ ಕೇಂದ್ರ, ಕರ್ನಾಟಕ ಸರ್ಕಾರ ಹಾಗೂ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.

ಈ ಘಟನೆ ಕುರಿತು ತನಿಖೆ ನಡೆಸಲು ವಿಶೇಷ ತಂಡ ರಚಿಸುವಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಬೆಂಗಳೂರು ವಕೀಲರ ಸಂಘ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಬಿ.ಎಸ್. ಚೌಹಾಣ್ ಮತ್ತು ಸ್ವತಂತ್ರ ಕುಮಾರ ಅವರನ್ನು ಒಳಗೊಂಡ ನ್ಯಾಯಪೀಠವು ಸಿಬಿಐ ಮತ್ತು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳಿಂದ ವಿವರಣೆ ಕೋರಿ ನೋಟಿಸ್ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.