ಶನಿವಾರ, ಮೇ 28, 2022
24 °C

ಅಧಿಕಾರ ವಿಕೇಂದ್ರೀಕರಣದಿಂದ ಪಾರದರ್ಶಕ ಆಡಳಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಂಟ್ವಾಳ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಧಿಕಾರ ವಿಕೇಂದ್ರೀಕರಣದಿಂದ ಮಾತ್ರ ಪಾರದರ್ಶಕ ಆಡಳಿತ ನಡೆಸಲು ಸಾಧ್ಯವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಬಂಟ್ವಾಳ ತಾಲ್ಲೂಕಿನ ಗ್ರಾಮ ಪಂಚಾಯಿತಿ ಅಧ್ಯಕ್ಷ- ಉಪಾಧ್ಯಕ್ಷರ ಒಕ್ಕೂಟದ ವತಿಯಿಂದ ಸೋಮವಾರ ಬಿ.ಸಿ.ರೋಡ್‌ನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಪ್ರಸಕ್ತ ಸನ್ನಿವೇಶದಲ್ಲಿ ಪದೇ ಪದೇ ಬದಲಾಗುತ್ತಿರುವ ಸರಕಾರದ ವಿವಿಧ ಸುತ್ತೋಲೆಗಳು ಗ್ರಾಮ ಪಂಚಾಯಿತಿ ಆಡಳಿತ ಮತ್ತು ಅಭಿವೃದ್ಧಿಗೆ ತೊಡಕಾಗಿ ಪರಿಣಮಿಸಿದೆ. ಇದಕ್ಕಾಗಿ ಗ್ರಾಮ ಪಂಚಾಯಿತಿ ಅಧಿಕಾರ ಮೊಟಕುಗೊಳಿಸದಂತೆ ಎಲ್ಲಾ ಜಾಗೃತ ಸದಸ್ಯರು ಒಗ್ಗೂಡಿ ಕಾರ್ಯನಿರ್ವಹಿಸಬೇಕು ಎಂದು ಅವರು ಸಲಹೆ ಮಾಡಿದರು.ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ ಪೂಜಾರಿ, ಕಾನೂನು ಸಲಹೆಗಾರ ರಾಜಾರಾಮ್ ನಾಯಕ್, ಪ್ರಮುಖರಾದ ಮಂಜು ವಿಟ್ಲ, ಗೋಪಾಲ ಅಂಚನ್, ಚಂದ್ರಶೇಖರ್, ಕಮಲಾಕ್ಷಿ ಮತ್ತಿತರರು ಉಪಸ್ಥಿತರಿದ್ದರು.ಒಕ್ಕೂಟದ ಅಧ್ಯಕ್ಷ ಸುಭಾಶ್ಚಂದ್ರ್ರ ಶೆಟ್ಟಿ ಸ್ವಾಗತಿಸಿ, ಉಪಾಧ್ಯಕ್ಷ ಮೋನಪ್ಪ ದೇವಸ್ಯ ವಂದಿಸಿದರು. ಕಾರ್ಯದರ್ಶಿ ಪ್ರಭಾಕರ ಪ್ರಭು ಕಾರ್ಯಕ್ರಮ ನಿರೂಪಿಸಿದರು.ಇದೇ ವೇಳೆ ಸಕಾಲ ಜಾಗೃತ ಅಭಿಯಾನ ತಂಡದ ಕಲಾವಿದರಿಂದ ನೃತ್ಯರೂಪಕ ಕಾರ್ಯಕ್ರಮ ನಡೆಯಿತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.