ಸೋಮವಾರ, ಮಾರ್ಚ್ 1, 2021
23 °C
ದೊಡ್ಡಬಳ್ಳಾಪುರಕ್ಕೆ ಉಪವಿಭಾಗಾಧಿಕಾರಿ ಕಚೇರಿ ಸ್ಥಳಾಂತರ

ಅಧಿಕೃತ ಆದೇಶ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಧಿಕೃತ ಆದೇಶ ಪ್ರಕಟ

ದೊಡ್ಡಬಳ್ಳಾಪುರ: ಉಪ ವಿಭಾಗಾಧಿಕಾರಿ ಕಚೇರಿ ನಗರದ ಎಪಿಎಂಸಿ ಕಟ್ಟಡಕ್ಕೆ ಸ್ಥಳಾಂತರ ಮಾಡಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.ಶುಕ್ರವಾರ ನಗರದ ಪ್ರವಾಸಿ ಮಂದಿರದಲ್ಲಿ  ಪತ್ರಿಕಾ­ಗೋಷ್ಠಿಯಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಅವರು ಸರ್ಕಾರದ ಅಧಿಕೃತ ಆದೇಶ ಪತ್ರವನ್ನು ಜಿಲ್ಲಾ ಹೋರಾಟ ಸಮಿತಿ ಸಂಚಾಲ ಕರಿಗೆ ನೀಡಿ ಮಾತ ನಾಡಿದರು.ಈ ಕುರಿತು ಜ.27 ರಂದು ಜಿಲ್ಲಾಧಿಕಾರಿ ಜತೆ ಚರ್ಚಿಸಿ ಸ್ಥಳಾಂತರದ ದಿನಾಂಕ ನಿಗದಿ ಪಡಿಸಲಾಗುವುದು ಎಂದರು.ಹೋರಾಟಕ್ಕೆ ಸಂದ ಜಯ: ಉಪ ವಿಭಾಗಾಧಿಕಾರಿ ಕಚೇರಿಯನ್ನು ನಗರದ ಎಪಿಎಂಸಿ ಕಚೇರಿಗೆ ಸ್ಥಳಾಂತರ ಮಾಡಲು ಸರ್ಕಾರ ಆದೇಶ ಹೊರ ಡಿಸಿರುವುದು ಜಿಲ್ಲಾ ಹೋರಾಟ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಹೋರಾಟಕ್ಕೆ ಸಂದ ಜಯ ಎಂದು ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ತಿಳಿಸಿದ್ದಾರೆ.ಶಾಸಕರಿಗೆ ಅಭಿನಂದನೆ: ಉಪ ವಿಭಾಗಾಧಿಕಾರಿ ಕಚೇರಿಯನ್ನು ಬೆಂಗಳೂರಿನಿಂದ ದೊಡ್ಡಬಳ್ಳಾಪುರಕ್ಕೆ ಸ್ಥಳಾಂತರ ಮಾಡುವಲ್ಲಿ ಶ್ರಮ ವಹಿಸಿದ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಎನ್‌.ಹನುಮಂತೇಗೌಡ, ಬಿಜೆಪಿ ಜಿಲ್ಲಾ ಅಧ್ಯಕ್ಷ ಬಿ.ಸಿ.ನಾರಾ­ಯಣಸ್ವಾಮಿ, ಎಪಿಎಂಸಿ ಮಾಜಿ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್‌, ಕನ್ನಡ ಪಕ್ಷದ ತಾಲ್ಲೂಕು ಅಧ್ಯಕ್ಷ    ಡಿ.ಸಂಜೀವ್‌ನಾಯ್ಕ್‌, ಕರವೇ (ಶಿವರಾಮೇಗೌಡ ಬಣ) ಬಿ.ಎಸ್‌. ಚಂದ್ರಶೇಖರ್‌, ಬಿಜೆಪಿ ವಕ್ತಾರ ಮುತ್ತಣ್ಣ ಅಭಿನಂದಿಸಿದ್ದಾರೆ.ನಿವೃತ್ತ ಹೈಕೋರ್ಟ್‌ ನ್ಯಾಯಮೂರ್ತಿ ನೇತೃತ್ವದ ಸಮಿತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರವನ್ನು ಯಾವ ತಾಲ್ಲೂಕಿನಲ್ಲಿ ಸ್ಥಾಪಿಸಬೇಕು ಎನ್ನುವ ಕುರಿತು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಸರ್ಕಾರ ವರದಿ ಪಡೆಯಲಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ಶುಕ್ರವಾರ ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.