ಅಧಿವೇಶನದಲ್ಲಿ ಕಟ್ಟಾ ಹಾಜರಿ

7

ಅಧಿವೇಶನದಲ್ಲಿ ಕಟ್ಟಾ ಹಾಜರಿ

Published:
Updated:

ಬೆಂಗಳೂರು: ಜಾಮೀನಿನ ಮೇಲೆ ಜೈಲಿನಿಂದ ಹೊರ ಬಂದು ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸೋಮವಾರ ವಿಧಾನಸಭೆಯ ಕಲಾಪದಲ್ಲಿ ಪಾಲ್ಗೊಂಡರು.ಕೆಐಎಡಿಬಿ ಭೂ ಹಗರಣದಲ್ಲಿ ಜೈಲಿಗೆ ಹೋಗಿದ್ದ ಕಟ್ಟಾ ಅವರಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ. ಅನಾರೋಗ್ಯಕ್ಕೆ ಒಳಗಾಗಿರುವ ಅವರು ಚಿಕಿತ್ಸೆ ಪಡೆಯುತ್ತಿದ್ದು, ಪ್ರಸಕ್ತ ಅಧಿವೇಶನದಲ್ಲಿ ಮೊದಲ ಬಾರಿಗೆ ಸದನದಲ್ಲಿ ಕಾಣಿಸಿಕೊಳ್ಳುವ ಮೂಲಕ ಗಮನಸೆಳೆದರು.ಕಾಂಗ್ರೆಸ್ ಶಾಸಕರಾದ ಕೆ.ಜೆ.ಜಾರ್ಜ್, ರೋಷನ್‌ಬೇಗ್ ಸೇರಿದಂತೆ ಕೆಲ ಶಾಸಕರು ಕಟ್ಟಾ ಬಳಿ ತೆರಳಿ ಯೋಗಕ್ಷೇಮ ವಿಚಾರಿಸಿದರು.

ಕೈಗಾ: ಕೇಂದ್ರಕ್ಕೆ ಮನವರಿಕೆ

ಬೆಂಗಳೂರು: ಕೈಗಾ ಅಣುವಿದ್ಯುತ್ ಸ್ಥಾವರದ ಸುತ್ತಮುತ್ತಲಿನ ಜನರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಅಲ್ಲಿನ ಜನರ ಬೇಡಿಕೆಗಳನ್ನು ಕೇಂದ್ರಕ್ಕೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ವಿಧಾನಸಭೆಯಲ್ಲಿ ತಿಳಿಸಿದರು.ಜೆಡಿಎಸ್‌ನ ಸುನಿಲ್ ಹೆಗಡೆ ಪ್ರಸ್ತಾವಕ್ಕೆ ಉತ್ತರಿಸಿದ ಅವರು, ಅಲ್ಲಿನ ಜನರ ಸಂಕಷ್ಟಗಳನ್ನು ಮುಖ್ಯಮಂತ್ರಿಗಳಿಗೂ ತಿಳಿಸಲಾಗಿದೆ. ಇದು ಕೇಂದ್ರ ಸರ್ಕಾರದ ಯೋಜನೆಯಾದ್ದರಿಂದ ಕೇಂದ್ರ ಸರ್ಕಾರವೇ ನೆರವಿಗೆ ಬರಬೇಕಾಗುತ್ತದೆ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry