ಶನಿವಾರ, ಮೇ 15, 2021
26 °C

ಅಧಿವೇಶನದ ನಂತರ ರಾಜ್ಯ ಪ್ರವಾಸ: ಕೆಜೆಪಿ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ವಿಧಾನ ಮಂಡಲದ ಅಧಿವೇಶನ ಮುಗಿದ ತಕ್ಷಣ ರಾಜ್ಯ ಪ್ರವಾಸ ಕೈಗೊಂಡು ಪಕ್ಷ ಸಂಘಟಿಸಲು ಕರ್ನಾಟಕ ಜನತಾ ಪಕ್ಷ (ಕೆಜೆಪಿ) ತೀರ್ಮಾನಿಸಿದೆ. ಕೆಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಬೆಂಗಳೂರಿನ ನಿವಾಸದಲ್ಲಿ ಶುಕ್ರವಾರ ಸಂಜೆ ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.



`ಪಕ್ಷದ ಪ್ರತ್ಯೇಕ ಅಸ್ತಿತ್ವವನ್ನು ಉಳಿಸಿಕೊಳ್ಳಲಾಗುತ್ತದೆ. ಲೋಕಸಭಾ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸುವುದು ಕಷ್ಟ ಎಂಬುದು ತಿಳಿದಿದೆ. ಆದರೆ ಯಾರ ಜೊತೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬುದನ್ನು ಸೂಕ್ತ ಸಮಯದಲ್ಲಿ ನಿರ್ಧರಿಸಲಾಗುತ್ತದೆ' ಎಂದು ಪಕ್ಷದ ಪ್ರಚಾರ ಸಮಿತಿಯ ಅಧ್ಯಕ್ಷ ವಿ. ಧನಂಜಯ ಕುಮಾರ್   `ಪ್ರಜಾವಾಣಿ'ಗೆ ತಿಳಿಸಿದರು.



ಅಧಿವೇಶನ ಮುಗಿದ ತಕ್ಷಣ, ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪಕ್ಷದ ಪ್ರಮುಖರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಮತ ದೊರೆತಿರುವ ಜಿಲ್ಲೆಗಳಲ್ಲಿ ಮೊದಲ ಹಂತದ ಪ್ರವಾಸ ಕೈಗೊಳ್ಳಲಾಗುವುದು ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.