ಗುರುವಾರ , ಜೂನ್ 17, 2021
23 °C
ಜಗಳೂರು ಪಟ್ಟಣ ಪಂಚಾಯ್ತಿ

ಅಧ್ಯಕ್ಷರಾಗಿ ಹಾಲಸ್ವಾಮಿ ಅವಿರೋಧ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಗಳೂರು: ಪಟ್ಟಣ ಪಂಚಾಯ್ತಿಗೆ ಶನಿವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಎನ್‌.ಎಂ. ಹಾಲಸ್ವಾಮಿ ಅಧ್ಯಕ್ಷರಾಗಿ

ಹಾಗೂ ಎಂ.ಮಂಜುನಾಥ್‌ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.ಅಧಿಕಾರಿ ಹಂಚಿಕೆ ಸೂತ್ರದ ಅನ್ವಯ  ಅಧ್ಯಕ್ಷರಾಗಿದ್ದ ಮಂಜುನಾಥ್‌ ಹಾಗೂ ಉಪಾಧ್ಯಕ್ಷರಾಗಿದ್ದ ಅಂಬಿಕಾ ಗುರುಸಿದ್ದಪ್ಪ ಅವರು ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಿತು.ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳು ಸಾಮಾನ್ಯ ವರ್ಗಕ್ಕೆ ಮೀಸಲಾಗಿವೆ. ಒಟ್ಟು 15 ಸ್ಥಾನಗಳಲ್ಲಿ ಕಾಂಗ್ರೆಸ್‌ 11, ಜೆಡಿಎಸ್‌ 2, ಬಿಜೆಪಿ ಹಾಗೂ ಪಕ್ಷೇತರ ತಲಾ ಒಬ್ಬರು ಸದಸ್ಯರಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಹಾಲಸ್ವಾಮಿ  ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮಂಜುನಾಥ್‌ ಅವರನ್ನು ಹೊರತುಪಡಿಸಿ ಬೇರೆ ಸದಸ್ಯರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆಯಿತು.ತಹಶೀಲ್ದಾರ್‌ ರೇಷ್ಮಾ ಹಾನಗಲ್‌ ಅವರು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ವೀರಾಚಾರಿ ಹಾಜರಿದ್ದರು.ಚುನಾವಣೆಯ ನಂತರ ಶಾಸಕ ಎಚ್‌.ಪಿ.ರಾಜೇಶ್‌ ಅವರು ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು

ಅಭಿನಂದಿಸಿದರು. ಕಾಂಗ್ರೆಸ್‌ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.