ಅಧ್ಯಕ್ಷರಿಗೆ ಕೊಕ್

7

ಅಧ್ಯಕ್ಷರಿಗೆ ಕೊಕ್

Published:
Updated:

ಬೆಂಗಳೂರು: ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಡಿ.ಲಕ್ಷ್ಮಿನಾರಾಯಣ, ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ಅಧ್ಯಕ್ಷ ಡಾ.ವಿಕ್ರಮ್ ಪಾಟೀಲ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಶಿವಾನಂದ ನಾಯಕ್ ಸೇರಿದಂತೆ ಹಲವರನ್ನು ಅಧ್ಯಕ್ಷ ಸ್ಥಾನದಿಂದ ತೆರವುಗೊಳಿಸಲಾಗಿದೆ.ಮಂಡ್ಯದ ಮೈಷುಗರ್ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ನಾಗರಾಜಪ್ಪ, ಅರಗ ಮತ್ತು ಬಣ್ಣದ ಕಾರ್ಖಾನೆಯ ಅಧ್ಯಕ್ಷ ವೀರೇಶ್ ಸೇರಿದಂತೆ ವಿವಿಧ ನಿಗಮ - ಮಂಡಳಿಗಳ ಅಧ್ಯಕ್ಷರ ನೇಮಕವನ್ನು ರದ್ದುಪಡಿಸಲಾಗಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.  ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಸೂಚನೆಯಂತೆ ಸೋಮವಾರವೇ ಕೆಲವು ನಿಗಮ - ಮಂಡಳಿಗಳ ಅಧ್ಯಕ್ಷರ ನೇಮಕವನ್ನು ರದ್ದುಪಡಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ ಬುಧವಾರವೂ ಕೆಲವು ನಿಗಮ - ಮಂಡಳಿಗಳ ಅಧ್ಯಕ್ಷರ ನೇಮಕ ರದ್ದು ಮಾಡಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry