ಅರಸೀಕೆರೆ: ತಾಲ್ಲೂಕು ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ವಿವಿಧ ಜನಪದ ಕಲಾತಂಡಗಳು ವಿಶೇಷ ಮೆರುಗು ನೀಡಿದವು.
ಸಮ್ಮೇಳನದ ಅಂಗವಾಗಿ ಪಟ್ಟಣದ ಬಸವರಾಜೇಂದ್ರ ಪ್ರೌಢಶಾಲೆ ಆವರಣದಲ್ಲಿ ತಹಶೀಲ್ದಾರ್ ಕೇಶವಮೂರ್ತಿ ರಾಷ್ಟ್ರ ಧ್ವಜಾರೋಹಣವನ್ನು, ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಎಲ್. ಜನಾರ್ದನ್ ನಾಡಧ್ವಜವನ್ನು, ತಾಲ್ಲೂಕು ಕಸಾಪ ಅಧ್ಯಕ್ಷ ಮೇಲೇಗೌಡ ಪರಿಷತ್ ಧ್ವಜಾರೋಹಣವನ್ನು ನೆರವೇರಿಸಿದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಸಮ್ಮೇಳನ ಅಧ್ಯಕ್ಷ ಡಿ.ಎಸ್. ರಾಮಸ್ವಾಮಿ ಅವರನ್ನು ಭವ್ಯ ಸಾರೋಟಿನಲ್ಲಿ ಕೂರಿಸಿ ಮೆರವಣಿಗೆ ಮಾಡಲಾಯಿತು. ಪಟ್ಟಣದ ಸರ್ಕಾರಿ ಜೆ.ಸಿ. ಆಸ್ಪತ್ರೆಯಿಂದ ಹೊರಟ ಮೆರವಣಿಗೆಗೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಚಾಲನೆ ನೀಡಿದರು. ಸಮ್ಮೇಳನ ಅಧ್ಯಕ್ಷರಿಗೆ ಮೈಸೂರು ಪೇಟ ತೊಡಿಸಿ, ಹಾರ ಹಾಕಲಾಯಿತು. ಇವರೊಂದಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಜನಾರ್ದನ್, ತಾಲ್ಲೂಕು ಕಸಾಪ ಅಧ್ಯಕ್ಷ ಮೇಲೇಗೌಡ ಇದ್ದರು.

ಪೂರ್ಣ ಕುಂಭಗಳನ್ನು ಹೊತ್ತ ನೂರಾರು ಮಹಿಳೆಯರು ಮೆರವಣಿಗೆಗೆ ಮೆರಗು ನೀಡಿದರು. ಜಾನಪದ ಕಲಾ ಪ್ರಕಾರಗಳಾದ ಕರಗ, ಡೊಳ್ಳು ಕುಣಿತ, ಕೋಲಾಟ ತಂಡಗಳ ಪ್ರದರ್ಶನ ಜನರ ಮನ ಸೆಳೆಯಿತು. ಕೀಲು ಕುದುರೆ, ನಂದಿಧ್ವಜ, ಡೊಳ್ಳು ಕುಣಿತವನ್ನು ರಸ್ತೆಯ ಎರಡು ಇಕ್ಕೆಲಗಳಲ್ಲಿ ನಿಂತಿದ್ದ ಸಾರ್ವಜನಿಕರು ವೀಕ್ಷಿಸಿದರು.

ಸಮ್ಮೇಳನಕ್ಕೆ ಮದುವಣಗಿತ್ತಿಯಂತೆ ಪಟ್ಟಣ ಸಿಂಗಾರಗೊಂಡಿತ್ತು. ಕಾರ್ಯಕ್ರಮದಲ್ಲಿ ನಿಕಟ ಪೂರ್ವ ಸಮ್ಮೇಳನಾಧ್ಯಕ್ಷ ರೇಣುಕಾ ಬಂಗಾರಿ ಅವರು ಈ ಬಾರಿಯ ಸಮ್ಮೇಳನಾಧ್ಯಕ್ಷ ರಾಮಸ್ವಾಮಿ ಅವರಿಗೆ ನಾಡಧ್ವಜ ಹಸ್ತಾಂತರಿಸಿದರು. ಸಮ್ಮೇಳನದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಊಟದ ವ್ಯವಸ್ಥೆ ಮಾಡಲಾಗಿತ್ತು. ಉದ್ಘಾಟನಾ ಸಮಾರಂಭದಲ್ಲಿ ಅಪಾರ ಜನ ಸೇರಿದ್ದರಾದರೂ ಮಧ್ಯಾಹ್ನ ನಡೆದ ಗೋಷ್ಠಿಗಳಿಗೆ ಜನರ ಪ್ರಕ್ರಿಯೆ ನೀರಸವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.