ಭಾನುವಾರ, ಜನವರಿ 26, 2020
28 °C

ಅಧ್ಯಕ್ಷ ಸ್ಥಾನ: ಪರಮೇಶ್ವರ್ ಸ್ಪಷ್ಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನ­ದಲ್ಲಿ ತಮ್ಮನ್ನು ಮುಂದುವರಿಸು­ವುದು ಹೈಕಮಾಂಡ್‌ಗೆ ಸೇರಿದ ವಿಚಾರ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಸಂಘಟಿಸು­ವಂತೆ ವರಿಷ್ಠರು ಸೂಚಿಸಿದ್ದಾರೆ. ಅದ­ರಂತೆ ಕೆಲಸ ಮಾಡುತ್ತಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ತಿಳಿಸಿದರು.ನಗರದಲ್ಲಿ ಶನಿವಾರ ಪತ್ರಕರ್ತ-ರೊಂ­ದಿಗೆ ಮಾತನಾಡಿದ ಅವರು, ವಿಧಾನ­ಸಭೆ ಅಧಿವೇಶನದಲ್ಲಿ ಭಾಗವ­ಹಿ-­ಸದ ಕಾಂಗ್ರೆಸ್‌ ಶಾಸಕರು ಮತ್ತು ಸಚಿ­ವರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಸಮಿತಿ ರಚನೆ ಮಾಡಲಾಗು­ವುದು. ಇದು ಪಕ್ಷದ ಆಂತರಿಕ ವಿಚಾರವಾಗಿದ್ದು, ಚರ್ಚೆ ನಡೆಸುವ ಅಗತ್ಯವಿಲ್ಲ ಎಂದರು.

ಪ್ರತಿಕ್ರಿಯಿಸಿ (+)