ಗುರುವಾರ , ಮಾರ್ಚ್ 4, 2021
30 °C

ಅನಂತಕುಮಾರ್‌ ಹೆಗಡೆ ನಾಮಪತ್ರ ಸಲ್ಲಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅನಂತಕುಮಾರ್‌ ಹೆಗಡೆ ನಾಮಪತ್ರ ಸಲ್ಲಿಕೆ

ಕಾರವಾರ: ಉತ್ತರ ಕನ್ನಡ (ಕೆನರಾ) ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತಕುಮಾರ್‌ ಹೆಗಡೆ ಗುರುವಾರ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಎಂ.ಟಿ. ರೇಜು ಅವರಿಗೆ ನಾಮಪತ್ರ ಸಲ್ಲಿಸಿದರು.ನಗರದ ಮಹಾದೇವ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ತೆರಳಿದ ಅವರು, ಅಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ಬಂದು ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಉಮೇದುವಾರಿಕೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರ ಪತ್ನಿ ಶ್ರೀರೂಪ, ಇಬ್ಬರು ಮಕ್ಕಳು, ಮಾಜಿ ಶಾಸಕ ಪ್ರಹ್ಲಾದ ರೆಹಮಾನಿ, ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ, ಕ್ಷೇತ್ರದ ಬಿಜೆಪಿ ಮಾಧ್ಯಮ ಪ್ರಮುಖ ರವಿ ಹೆಗಡೆ ಹೂವಿನಮನೆ, ಜಿಲ್ಲಾ ಘಟಕದ ಅಧ್ಯಕ್ಷ ಎಂ.ಜಿ. ನಾಯ್ಕ ಮತ್ತಿತರರ ಮುಖಂಡರು ಉಪಸ್ಥಿತರಿದ್ದರು.ಜಿಲ್ಲಾಧಿಕಾರಿ ಕಚೇರಿ ಆವರಣದ ಹೊರಭಾಗದಲ್ಲಿ 40ಕ್ಕೂ ಹೆಚ್ಚು ಕಾರ್ಯಕರ್ತರು ನೆರೆದಿದ್ದರು. ದಾಖಲೆ ಬಹುಮತ: ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅನಂತಕುಮಾರ್‌ ಹೆಗಡೆ, ಈ ಕ್ಷೇತ್ರದಿಂದ ನಾಲ್ಕು ಬಾರಿ ಸಂಸದನಾಗಿ ಆಯ್ಕೆಯಾಗಿದ್ದೇನೆ. ಈ ಬಾರಿಯೂ ದಾಖಲೆ ಬಹುಮತ ಸಿಗಲಿದೆ ಎಂದ ಅವರು, ಈ ಕ್ಷೇತ್ರದ ಜನರು ಬಿಜೆಪಿಗೆ ಆಶೀರ್ವಾದ ಮಾಡಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.‘ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಬಿಜೆಪಿ ಗೆಲುವಿಗಾಗಿ ಕಾರ್ಯಕರ್ತರು ಒಕ್ಕೊರಲದಿಂದ ಶ್ರಮಿಸುತ್ತಿದ್ದಾರೆ. ಈ ದೇಶದ ಸಂಸ್ಕೃತಿಯನ್ನು ಒಪ್ಪಿಕೊಂಡು ಯಾರು ಮತ ಹಾಕುತ್ತಾರೋ ಅವರಿಗೆಲ್ಲ ಸ್ವಾಗತವಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.*‘ಚುನಾವಣೆ ಅಲ್ಲ; ಧರ್ಮಯುದ್ಧ’

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.