ಅನಗತ್ಯ ಗೊಂದಲ ಸೃಷ್ಟಿ: ಡಿವಿಎಸ್

7

ಅನಗತ್ಯ ಗೊಂದಲ ಸೃಷ್ಟಿ: ಡಿವಿಎಸ್

Published:
Updated:

ಬೆಂಗಳೂರು: `ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಬಲಿಗರು ನನ್ನ ಮತ್ತು ಯಡಿಯೂರಪ್ಪ ಮಧ್ಯೆ ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ~ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹೇಳಿದರು.`ನನ್ನ ಮತ್ತು ಅವರ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳು ಇಲ್ಲ. ಮೂರು ದಿನಗಳ ಹಿಂದೆ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಹಲವು ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಿದ್ದೇನೆ~ ಎಂದು ಅವರು `ಪ್ರಜಾವಾಣಿ~ಗೆ ತಿಳಿಸಿದರು.`ಭೇಟಿ ಸಂದರ್ಭದಲ್ಲಿ ಯಾವುದಾದರೂ ಸ್ಥಾನಮಾನ ಕಲ್ಪಿಸಿಕೊಡುವ ಬಗ್ಗೆ ಅವರು ನನ್ನೊಂದಿಗೆ ಪ್ರಸ್ತಾಪಿಸಿದರು. ಈ ವಿಷಯ ಹೈಕಮಾಂಡ್‌ಗೆ ಬಿಟ್ಟ ವಿಷಯ ಎಂಬುದಾಗಿ ಮನವರಿಕೆ ಮಾಡಿಕೊಟ್ಟೆ. ಇದಕ್ಕೆ ಅವರೂ ಸಮ್ಮತಿಸಿದರು. ಇಷ್ಟಾದರೂ ಅವರ ಬೆಂಬಲಿಗರು ಪದೇ ಪದೇ ಹೇಳಿಕೆಗಳನ್ನು ನೀಡುವ ಮೂಲಕ ಗೊಂದಲವನ್ನುಂಟು ಮಾಡುತ್ತಿದ್ದಾರೆ~ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry