ಅನಧಿಕೃತ ಫ್ಲೆಕ್ಸ್, ಬ್ಯಾನರ್ ತೆರವು

7

ಅನಧಿಕೃತ ಫ್ಲೆಕ್ಸ್, ಬ್ಯಾನರ್ ತೆರವು

Published:
Updated:
ಅನಧಿಕೃತ ಫ್ಲೆಕ್ಸ್, ಬ್ಯಾನರ್ ತೆರವು

ಕೋಲಾರ: ನಗರದ ಪ್ರಮುಖ ರಸ್ತೆಗಳಲ್ಲಿ ಅನಧಿಕೃತವಾಗಿ ಅಳವಡಿಸಿದ್ದ ಫ್ಲೆಕ್ಸ್, ಬ್ಯಾನರ್‌ಗಳನ್ನು ನಗರಸಭೆ ಸಿಬ್ಬಂದಿ ಶುಕ್ರವಾರ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದರು.ನಗರದ ಟೇಕಲ್ ರಸ್ತೆಯಿಂದ ಕಾರ್ಯಾಚರಣೆ ಆರಂಭಿಸಿದ ಸಿಬ್ಬಂದಿ ಕ್ಲಾಕ್ ಟವರ್, ಹೊಸ ಬಸ್ ನಿಲ್ದಾಣ ವೃತ್ತ, ಎಂಬಿ ರಸ್ತೆಯಲ್ಲಿ ಸಂಚರಿಸಿ ಸುಮಾರು 50ಕ್ಕೂ ಹೆಚ್ಚು  ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಿದರು.ಜೆಸಿಬಿ ಸಹಾಯದಲ್ಲಿ ಬೃಹತ್ ಬ್ಯಾನರ್‌ಗಳನ್ನು ಸಿಬ್ಬಂದಿ ತೆರವುಗೊಳಿಸುತ್ತಿದ್ದ ಸಂದರ್ಭ ಸಾರ್ವಜನಿಕರು ಕುತೂಹಲದಿಂದ ವೀಕ್ಷಿಸಿದರು. ನಗರ ಠಾಣೆ ಪಿಎಸ್‌ಐ ಚಂದ್ರಪ್ಪ ಮತ್ತು ಸಿಬ್ಬಂದಿ, ನಗರಸಭೆ ಕಂದಾಯ ಅಧಿಕಾರಿ ಚಲಪತಿ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry