ಗುರುವಾರ , ಮೇ 13, 2021
39 °C

ಅನಧಿಕೃತ ಮದ್ಯದಂಗಡಿಗಳ ವಿರುದ್ಧ ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅನಧಿಕೃತ ಮದ್ಯದ ಅಂಗಡಿಗಳನ್ನು ತೆರವುಗೊಳಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಸೂಕ್ತ ಕಾರ್ಯಕ್ರಮ ರೂಪಿಸಲಾಗುವುದು ಎಂದು ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಶುಕ್ರವಾರ ವಿಧಾನಸಭೆಯಲ್ಲಿ ತಿಳಿಸಿದರು.ಅನಧಿಕೃತ ಮದ್ಯದ ಅಂಗಡಿಗಳ ಹಾವಳಿ ಬಗ್ಗೆ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್‌ನ ಎನ್.ಎಚ್.ಶಿವಶಂಕರ ರೆಡ್ಡಿ, ಗೌರಿಬಿದನೂರಿನಲ್ಲಿ ಈ ಸಮಸ್ಯೆ ಗಂಭೀರವಾಗಿದೆ. ಇದಕ್ಕೆ ಕಡಿವಾಣ ಹಾಕಿ ಎಂದು ಆಗ್ರಹಿಸಿದರು.ಇದಕ್ಕೆ ಧ್ವನಿಗೂಡಿಸಿದ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ, ಇವುಗಳ ನಿಯಂತ್ರಣಕ್ಕೆ ವಿಶೇಷ ಕಾರ್ಯಕ್ರಮ ರೂಪಿಸುವ ಅಗತ್ಯ ಇದೆ ಎಂದರು. ಕೆಜೆಪಿ ಶಾಸಕ ಬಿ.ಆರ್.ಪಾಟೀಲ ಮಾತನಾಡಿ, ಕಿರಾಣಿ ಅಂಗಡಿ, ಮೊಬೈಲ್ ಶಾಪ್‌ಗಳಲ್ಲಿ ಮದ್ಯ ಮಾರಾಟ ಆಗುತ್ತಿದೆ.ಬೊಕ್ಕಸಕ್ಕೆ ಆದಾ ಯ ಬರುತ್ತದೆ ಎಂಬ ಕಾರಣಕ್ಕೆ ಸುಮ್ಮನಿರುವುದು ಸರಿಯಲ್ಲ. ಜನಜೀವನಕ್ಕಿಂತ ಬೊಕ್ಕಸ ಮುಖ್ಯವೇ? ಎಂದು ಪ್ರಶ್ನಿಸಿದರು.ಅನಧಿಕೃತ ಮದ್ಯದ ಅಂಗಡಿಗಳನ್ನು ನಿಯಂತ್ರಿಸಲು ಸರ್ಕಾರ ಕ್ರಮಕೈಗೊಳ್ಳಲಿದೆ. ಆದಷ್ಟು ಬೇಗ ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.ವೈದ್ಯರ ನೇಮಕ: ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕು ಸೇರಿದಂತೆ ರಾಜ್ಯದ ವಿವಿಧೆಡೆ ಅಗತ್ಯವಿರುವ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ವಿಧಾನಸಭೆಯಲ್ಲಿ ಭರವಸೆ ನೀಡಿದರು.ಶೂನ್ಯವೇಳೆಯಲ್ಲಿ ಕೆ.ಎನ್.ರಾಜಣ್ಣ ಮಾಡಿದ ಪ್ರಸ್ತಾವಕ್ಕೆ ಉತ್ತರಿಸಿದ ಅವರು, ಕೆಲವು ಕಡೆ ವೈದ್ಯರ ಹುದ್ದೆಗಳು ಖಾಲಿ ಇರುವುದು ನಿಜ. ಸಾರ್ವಜನಿಕರಿಗೆ ತೊಂದರೆ ಆಗುವುದನ್ನು ತಪ್ಪಿಸುವ ಉದ್ದೇಶದಿಂದ ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.