ಅನಧಿಕೃತ ವಿದ್ಯುತ್ ಕಡಿತ:ಕಾಂಗ್ರೆಸ್ ಟೀಕೆ
ಬೆಂಗಳೂರು: ಬೇಸಿಗೆಯಲ್ಲಿ ವಿದ್ಯುತ್ ಅಭಾವ ಬಾರದಂತೆ ನೋಡಿಕೊಳ್ಳಲಾಗುವುದು ಎಂಬ ರಾಜ್ಯದ ಇಂಧನ ಸಚಿವರ ಹೇಳಿಕೆ ಹುಸಿಯಾಗಿದೆ. ಅನಧಿಕೃತ ವಿದ್ಯುತ್ ಕಡಿತ ಜಾರಿಗೆ ಬಂದಿದೆ. ಇಡೀ ರಾಜ್ಯ ವಿದ್ಯುತ್ ಕ್ಷಾಮದ ದವಡೆಗೆ ಸಿಲುಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಮುಖ್ಯಮಂತ್ರಿ ಮತ್ತು ಇಂಧನ ಸಚಿವರು ವಿದ್ಯುತ್ ಪೂರೈಕೆ ಕುರಿತು ನೀಡಿದ್ದ ಭರವಸೆಗಳು ಹುಸಿಯಾಗಿವೆ ಎಂದು ಸರ್ಕಾರವನ್ನು ಟೀಕಿಸಿದ್ದಾರೆ.
ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ವಿದ್ಯುತ್ ಸಮಸ್ಯೆ ಮಿತಿಮೀರಿದೆ. ಬೇಸಿಗೆಯ ಆರಂಭದ ಹಂತದಲ್ಲಿಯೇ ಹೀಗಾದರೆ, ಮೇ ತಿಂಗಳ ವೇಳೆಗೆ ಈ ಸಮಸ್ಯೆ ಇನ್ನೂ ಗಂಭೀರವಾಗಲಿದೆ. ಬಿಜೆಪಿ ಸರ್ಕಾರದ ವೈಫಲ್ಯಗಳ ಸಾಲಿಗೆ ಇದೂ ಒಂದಾಗಿ ಸೇರಿಕೊಳ್ಳಲಿದೆ ಎಂದು ಅವರು ಛೇಡಿಸಿದ್ದಾರೆ. ಸರ್ಕಾರ ತುರ್ತು ಕ್ರಮ ಕೈಗೊಂಡು ರಾಜ್ಯದ ಜನತೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.