ಶುಕ್ರವಾರ, ಜೂನ್ 25, 2021
25 °C

ಅನಧಿಕೃತ ಶೆಡ್ ತೆರವುಗೊಳಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜರಾಜೇಶ್ವರಿ ನಗರ ವಲಯಕ್ಕೆ ಸೇರಿರುವ ವಾರ್ಡ್ ನಂ. 130, ಮರಿಯಪ್ಪನ ಪಾಳ್ಯ, 10ನೇ ಅಡ್ಡ ರಸ್ತೆ (ಇಂಡಿಯನ್ ಆಯಿಲ್ ಪೆಟ್ರೋಲ್ ಬ್ಯಾಂಕ್ ಹತ್ತಿರ) ರಸ್ತೆಯ ಮಧ್ಯದಲ್ಲಿ ಅನಧಿಕೃತವಾಗಿ ಕಾರ್ ಶೆಡ್ ನಿರ್ಮಿಸಲಾಗಿದೆ. 

ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗಲು, ಬಸ್ ನಿಲ್ದಾಣಕ್ಕೆ ಹೋಗಲು ಹಾಗೂ ದೇವಸ್ಥಾನಕ್ಕೆ ಹೋಗಲು ರಸ್ತೆಯ ಮಧ್ಯೆ ಕಾರ್ ಶೆಡ್ ಇರುವುದರಿಂದ ತೊಂದರೆಯಾಗಿದೆ. ಈಗಾಗಲೇ 25 ಜನ ನಾಗರಿಕರ ಸಹಿಯೊಂದಿಗೆ ನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದ್ದು ಯಾವುದೇ ಕ್ರಮ ಜರುಗಿಸಿಲ್ಲ. ಇದು ಸಾಲದೆಂಬಂತೆ ರಸ್ತೆಯ ಮಧ್ಯೆ ಗೇಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ ತುಂಬಾ ತೊಂದರೆ ಕೊಡುತ್ತಿದ್ದಾರೆ. ಪಾಲಿಕೆ ಆಯುಕ್ತರು ಸ್ಥಳ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಂಡು ಈ ಭಾಗದ ನಾಗರಿಕರಿಗೆ ಅನುಕೂಲ ಮಾಡಿಕೊಡಬೇಕಾಗಿ ಮನವಿ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.