ಅನರ್ಹಗೊಳಿಸುವ ಅಧಿಕಾರ ನನಗಿಲ್ಲ

7

ಅನರ್ಹಗೊಳಿಸುವ ಅಧಿಕಾರ ನನಗಿಲ್ಲ

Published:
Updated:

ಬೆಂಗಳೂರು:  `ಶಾಸಕರಾದ ಲಕ್ಷ್ಮಣ ಸವದಿ, ಸಿ.ಸಿ.ಪಾಟೀಲ ಮತ್ತು ಕೃಷ್ಣ ಪಾಲೆಮಾರ್ ಅವರನ್ನು ಅನರ್ಹಗೊಳಿಸುವ ಸಂಬಂಧ ವಿಧಾನಸಭಾಧ್ಯಕ್ಷರೇ ತೀರ್ಮಾನ ಕೈಗೊಳ್ಳಬೇಕು~ ಎಂದು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಹೇಳಿದರು.

 

ಖಾಸಗಿ ಸಮಾರಂಭವೊಂದರಲ್ಲಿ ಪಾಲ್ಗೊಂಡು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, `ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಆ ಮೂವರು ಶಾಸಕರನ್ನು ಅನರ್ಹಗೊಳಿಸುವ ವಿಷಯ ಸದನದಲ್ಲೇ ನಿರ್ಧಾರವಾಗಬೇಕು~ ಎಂದರು.`ರಾಜ್ಯಪಾಲನಾದ ನಾನು ಸಂವಿಧಾನದ ಭಾಗವಷ್ಟೇ. ಶಾಸಕರನ್ನು ಅನರ್ಹಗೊಳಿಸುವ ಅಧಿಕಾರ ನನಗೆ ಇಲ್ಲ. ಆ ಬಗ್ಗೆ ನಿರ್ಧಾರ ಕೈಗೊಳ್ಳುವ ಅಧಿಕಾರ ವಿಧಾನಸಭಾಧ್ಯಕ್ಷರಿಗೆ ಇದೆ~ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry