ಅನಸೂಯ ಯಾದಗಿರಿ ಜಿ.ಪಂ. ಅಧ್ಯಕ್ಷೆ

5

ಅನಸೂಯ ಯಾದಗಿರಿ ಜಿ.ಪಂ. ಅಧ್ಯಕ್ಷೆ

Published:
Updated:

ಯಾದಗಿರಿ: ಜಿಲ್ಲಾ ಪಂಚಾಯಿತಿ ಮೊದಲ ಅವಧಿಯ ಅಧ್ಯಕ್ಷರಾಗಿ ತಾಲ್ಲೂಕಿನ ಕೊಂಕಲ್ ಕ್ಷೇತ್ರದ ಅನಸೂಯಾ ಬೋರಬಂಡ್ ಅವಿರೋಧವಾಗಿ ಆಯ್ಕೆಯಾದರು.



ಬುಧವಾರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಶಹಾಪುರ ತಾಲ್ಲೂಕಿನ ಸಗರ ಕ್ಷೇತ್ರದ ನಾಗನಗೌಡ ಸುಬೇದಾರ ಅವಿರೋಧವಾಗಿ ಆಯ್ಕೆಯಾದರು.

ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದು ನಾಮಪತ್ರ ಮಾತ್ರ ಸಲ್ಲಿಕೆ ಆಗಿದ್ದರಿಂದ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿಗಳಾದ ಪ್ರಾದೇಶಿಕ ಆಯುಕ್ತ ರಜನೀಶ ಗೋಯಲ್ ಪ್ರಕಟಿಸಿದರು.



ಜಿಲ್ಲಾ ಪಂಚಾಯಿತಿಯ ಒಟ್ಟು 22 ಸ್ಥಾನಗಳಲ್ಲಿ 15 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿತ್ತು. ಏಳು ಸ್ಥಾನ ಗಳಿಸಿರುವ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಿಲ್ಲ. ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕಟವಾಗುತ್ತಿದ್ದಂತೆಯೇ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರ ದಂಡು ಜಿ.ಪಂ. ಸಭಾಂಗಣ ಪ್ರವೇಶಿಸಿ, ಹೂಮಾಲೆ ಹಾಕಿ ಅಭಿನಂದಿಸಿದರು. ಸಾಲುಸಾಲಾಗಿ ಬರುತ್ತಿದ್ದ ಕಾರ್ಯಕರ್ತರನ್ನು ನಿಭಾಯಿಸಲು ಪೊಲೀಸರು ಪ್ರಯಾನಪಟ್ಟರು.



ರಸ್ತೆ, ನೀರು, ಶೌಚಾಲಯ, ಚರಂಡಿ ಸೇರಿದಂತೆ ಅಗತ್ಯವಾಗಿರುವ ಮೂಲ ಸೌಕರ್ಯ ಕಲ್ಪಿಸಲು ಆದ್ಯತೆ ನೀಡುವುದಾಗಿ ಅಧ್ಯಕ್ಷರು ಹೇಳಿದರು. ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ, ಶಾಸಕ ಬಾಬುರಾವ ಚಿಂಚನಸೂರ, ಪಕ್ಷದ ಎಲ್ಲ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.



 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry