ಇಸ್ಲಾಮಾಬಾದ್ (ಐಎಎನ್ಎಸ್/ಪಿಟಿಐ): ಇಲ್ಲಿನ ಸುಪ್ರೀಂಕೋರ್ಟ್ ಪ್ರಧಾನಿ ಯೂಸುಫ್ ರಜಾ ಗಿಲಾನಿ ಅವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದ ಬೆನ್ನಲ್ಲೆ ಗಿಲಾನಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ರಾಷ್ಟ್ರೀಯ ವ್ಯಾಜ್ಯ ಇತ್ಯರ್ಥ ಸುಗ್ರಿವಾಜ್ಞೆಯನ್ನು ರದ್ದುಗೊಳಿಸಿ ಅಧ್ಯಕ್ಷ ಜರ್ದಾರಿ ಸೇರಿದಂತೆ ಇತರರ ಬಗೆಗೆ ಇರುವ ಹಳೆಯ ಭ್ರಷ್ಟಾಚಾರ ಪ್ರಕರಣಗಳನ್ನು ಮತ್ತೆ ತನಿಖೆಗೆ ಒಳಪಡಿಸಬೇಕೆಂದು ಸೂಚನೆ ನೀಡಿದ್ದರೂ ಅದನ್ನು ಪಾಲಿಸದ ಪ್ರಧಾನಿ ಬಗೆಗೆ ಕೆಂಡಮಂಡಲವಾಗಿರುವ ಸುಪ್ರೀಂಕೋರ್ಟ್ ಸೋಮವಾರ ಬೆಳಿಗ್ಗೆ ಗಿಲಾನಿ ಅವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಮಾಡಿತಲ್ಲದೆ ಜನವರಿ 19 ರೊಳಗೆ ತನ್ನ ಮುಂದೆ ಖುದ್ದು ಹಾಜರಾಗುವಂತೆ ಆಜ್ಞಾಪಿಸಿತು.

ಇದರಿಂದ ಭಾರಿ ಮುಖಭಂಗಕ್ಕೊಳಗಾದ ಗಿಲಾನಿ ಮಿತ್ರಪಕ್ಷಗಳ ಮುಖಂಡರೂ ಸೇರಿದಂತೆ ಅಧ್ಯಕ್ಷ ಜರ್ದಾರಿ ಅವರೊಂದಿಗೆ ಸಮಾಲೋಚನೆ ನಡೆಸಿದರು. ಈ ಸಮಯದಲ್ಲಿ ಅವರು ದೇಶದ ಸಂಸತ್ತು ಹಾಗೂ ಪ್ರಜಾತಂತ್ರ ವ್ಯವಸ್ಥೆಯನ್ನು ಕಾಪಾಡುವುದಕ್ಕೋಸ್ಕರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಆದರೆ ಮಿತ್ರಪಕ್ಷಗಳ ನಾಯಕರು ಹಾಗೂ ಅಧ್ಯಕ್ಷ ಜರ್ದಾರಿ ಅವರು ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಗಿಲಾನಿ ಅವರಿಗೆ ಸಲಹೆ ಮಾಡಿದರು ಎಂದು ವರದಿಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.