ಸೋಮವಾರ, ಏಪ್ರಿಲ್ 12, 2021
29 °C

ಅನ್ಯಾಯದ ವಿರುದ್ಧ ಹೋರಾಡಲು ಸಂಘಟನೆಗಳಿಗೆ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಕ್ಷ್ಮೇಶ್ವರ: ಸಮಾಜದಲ್ಲಿ ಇಂದು ಎಲ್ಲ ರಂಗಗಳಲ್ಲಿ ಭ್ರಷ್ಟಾಚಾರ ಹಾಗೂ ಅನ್ಯಾಯ ತುಂಬಿ ತುಳುಕುತ್ತಿದ್ದು ಸಂಘ ಸಂಸ್ಥೆಗಳು ಇವುಗಳ ವಿರುದ್ಧ ಹೋರಾಟ ನಡೆಸಬೇಕು ಎಂದು ಮಾಜಿ ಶಾಸಕ ಎಸ್.ಎನ್. ಪಾಟೀಲ ಸಲಹೆ ನೀಡಿದರು.ಪಟ್ಟಣದ ಕೆಂಚಲಾಪುರದ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಗುರುವಾರ ಕರ್ನಾಟಕ ರಾಜ್ಯ ನವಕರ್ನಾಟಕ ಜನಪರ ಅಭಿವೃದ್ಧಿ ವೇದಿ ಕೆಯ ಲಕ್ಷ್ಮೇಶ್ವರ ಪಟ್ಟಣದ ಅಲ್ಪ ಸಂಖ್ಯಾತರ ಹಾಗೂ ಕಾರ್ಮಿಕ ಘಟಕ ಗಳನ್ನು ಉದ್ಘಾಟಿಸಿ ಮಾತನಾಡಿದರು.ಸಮಾಜ ಸೇವೆಯ ಸೋಗಿನಲ್ಲಿ ಇಂದು ನೂರಾರು ಸಂಘಟನೆಗಳು ಜನತೆಯ ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ಆದರೆ ಜನರ ಸೇವೆಯೇ ಮುಖ್ಯ ಗುರಿಯನ್ನಾಗಿಸಿಕೊಂಡು ಹೋರಾಟ ಮಾಡುವ ಸಂಘಟನೆಗಳು ಬೆಳಕಿಗೆ ಬರುತ್ತವೆ. ಈ ನಿಟ್ಟಿನಲ್ಲಿ ನವ ಕರ್ನಾಟಕ ಜನಪರ ಅಭಿವೃದ್ಧಿ ವೇದಿಕೆ ಜನರ ಸಮಸ್ಯೆಗೆ ಸ್ಪಂದಿಸಿ ಕೆಲಸ ಮಾಡು ತ್ತಿರುವುದು ಶ್ಲಾಘನೀಯ ಎಂದರು.ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಐ.ಮುಳಗುಂದ ದೀನ ದಲಿತರು ಹಾಗೂ ಬಡವರಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ಆದರೆ ಆ ಯೋಜನೆಗಳು ಸರಿಯಾದ ಫಲಾನುಭವಿಗಳಗೆ ದೊರೆಯುತ್ತಿಲ್ಲ. ಹೀಗಾಗಿ ಬಡವರು ಇವುಗಳಿಂದ ವಂಚಿತರಾಗಿದ್ದು ಇಂಥವರ ಸಮಸ್ಯೆಗೆ ಸ್ಪಂದಿಸುವಲ್ಲಿ ವೇದಿಕೆ ಸದಾ ಮುಂದೆ ಇರುತ್ತದೆ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.