ಮಂಗಳವಾರ, ಏಪ್ರಿಲ್ 20, 2021
32 °C

ಅನ್ವೇಷಣೆಗೆ ಹೆಚ್ಚಿನ ಅವಕಾಶ ಬೇಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ನಿರಂತರ ಹೊಸದಾದ ಅನ್ವೇಷಣೆಗಳಿಂದ ಸಮಾಜವು ಬದಲಾವಣೆಯಾಗುತ್ತದೆ. ಅಂತಹ ಬದಲಾವಣೆಗೆ ಇಂದಿನ ಶಿಕ್ಷಣವು ಆಸ್ಪದ ನೀಡಬೇಕು~ ಎಂದು ಉನ್ನತ ಶಿಕ್ಷಣ ಸಚಿವ ಸಿ.ಟಿ. ರವಿ ಅಭಿಪ್ರಾಯಪಟ್ಟರು.

ಮಂಗಳವಾರ ನಡೆದ ಶ್ರೀಮತಿ ವಿ.ಎಚ್.ಡಿ. ಕೇಂದ್ರೀಯ ಗೃಹ ವಿಜ್ಞಾನ ಸಂಸ್ಥೆಯ ವಿದ್ಯಾರ್ಥಿ ಸಾಂಸ್ಕೃತಿಕ ಸಂಘ, ಕನ್ನಡ ಸಂಘ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

`ಸಮಾಜವು ಹರಿಯುವ ನೀರಾಗಬೇಕು. ಅದಕ್ಕಾಗಿ ಸಮಾಜದಲ್ಲಿ ಅನ್ವೇಷಣೆಗೆ ಹೆಚ್ಚಿನ ಅವಕಾಶಗಳಿರಬೇಕು. ಪ್ರಯೋಗಶೀಲತೆಗೆ ಹೆಚ್ಚಿನ ಆದ್ಯತೆಯಿರಬೇಕು~ ಎಂದು  ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕ ದಿನೇಶ್ ಗುಂಡೂರಾವ್, ಸಂಗೀತ ನಿರ್ದೇಶಕ ಗುರುಕಿರಣ್, ಬಿಬಿಎಂಪಿ ಸದಸ್ಯ ಎ.ಎಲ್. ಶಿವಕುಮಾರ್, ಪ್ರಾಂಶುಪಾಲ ಪ್ರೊ.ಓ. ಓಬಯ್ಯ, ವಿದ್ಯಾರ್ಥಿ ಸಾಂಸ್ಕೃತಿಕ ಸಂಘದ ಸಂಚಾಲಕಿ ಡಾ. ಎಸ್.ಎನ್. ಮಂಜುಳಾ ಮತ್ತಿತರರು ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.