ಸೋಮವಾರ, ಜನವರಿ 20, 2020
19 °C

ಅಪಘಾತ: ಅಪರಿಚಿತ ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಕೋಟೆ: ಪಟ್ಟಣದ ಹೊರವಲಯದ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದ್ದರಿಂದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ.ತೀವ್ರವಾಗಿ ಗಾಯಗೊಂಡಿದ್ದ ಆ ವ್ಯಕ್ತಿಯನ್ನು ಬೆಂಗಳೂರಿನ ನಿಮ್ಹಾನ್ಸ್‌ಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅಲ್ಲಿ  ಅವರು ಮೃತಪಟ್ಟರು. ಸುಮಾರು 35 ವರ್ಷ ವಯಸ್ಸಿನ ಆ ವ್ಯಕ್ತಿ ಬಲಗೈಯಲ್ಲಿ ಹಿತ್ತಾಳೆ ಬಳೆ ತೊಟ್ಟಿದ್ದು ಬಲಗಾಲಿನ ಬೆರಳುಗಳ ಮೇಲೆ ಬಿಳಿ ಮಚ್ಚೆ ಇದೆ. ಅಪಘಾತದ ನಂತರ ಕಾರು ನಿಲ್ಲಿಸದೆ ಪರಾರಿಯಾಗಿದೆ.

ಪ್ರತಿಕ್ರಿಯಿಸಿ (+)