ಬುಧವಾರ, ಏಪ್ರಿಲ್ 21, 2021
25 °C

ಅಪಘಾತ: ಅಪ್ಪ, ಮಗ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ನಿಂತಿದ್ದ ಲಾರಿಗೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದ ಪರಿಣಾಮ ಅಪ್ಪ, ಮಗ ಸ್ಥಳದಲ್ಲೇ ಮೃತಪಟ್ಟು, ಇನ್ನಿಬ್ಬರು ಗಾಯಗೊಂಡ ಘಟನೆ ನಗರದ ಗುಬ್ಬಿಗೇಟ್ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದೆ.ಮೃತರನ್ನು ಬೆಂಗಳೂರು ಮಂಗಮ್ಮನಪಾಳ್ಯದ ನಿವಾಸಿಗಳಾದ ಮಹೇಶ್ವರಪ್ಪ (50) ಹಾಗೂ ಅವರ ಮಗ ರಂಜನ್ (21) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮಹೇಶ್ವರಪ್ಪ ಪತ್ನಿ ತಾಯಮ್ಮ, ಮಗಳು ಸೌಮ್ಯ ಅವರಿಗೆ ಗಂಭೀರ ಗಾಯಗಳಾಗಿವೆ. ಮಹೇಶ್ವರಪ್ಪ ಸಮಾಜ ಕಲ್ಯಾಣ ಇಲಾಖೆ ಸಚಿವರ ಆಪ್ತ ಸಹಾಯಕರ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ತಮ್ಮ ಊರಾದ ಚಿಕ್ಕಮಗಳೂರು ಜಿಲ್ಲೆಯ ಅಗ್ರಹಾರಕ್ಕೆ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.