ಅಪಘಾತ: ಇಬ್ಬರ ಸಾವು

7

ಅಪಘಾತ: ಇಬ್ಬರ ಸಾವು

Published:
Updated:

ಬೆಂಗಳೂರು: ನಗರದ ಕನಕಪುರ ರಸ್ತೆಯ ದೊಡ್ಡಕಲ್ಲಸಂದ್ರದಲ್ಲಿ ಸೋಮವಾರ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ರಾಜು (66) ಎಂಬುವರು ಸಾವನ್ನಪ್ಪಿದ್ದು, ಹಳೇ ಮದ್ರಾಸ್ ರಸ್ತೆಯಲ್ಲಿ ಭಾನುವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬಾಬು (32) ಎಂಬುವರು ಮೃತಪಟ್ಟಿದ್ದಾರೆ.ಜರಗನಹಳ್ಳಿಯ ರಾಜೀವ್‌ಗಾಂಧಿ ರಸ್ತೆ ನಿವಾಸಿಯಾದ ರಾಜು ಅವರು ಬೈಕ್‌ನಲ್ಲಿ ಮಧ್ಯಾಹ್ನ ಮನೆಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಅವರ ಬೈಕ್‌ಗೆ ಲಾರಿಯೊಂದು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಈ ವೇಳೆ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.ಲಾರಿ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದು, ಕುಮಾರಸ್ವಾಮಿಲೇಔಟ್ ಸಂಚಾರ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.ಮತ್ತೊಂದು ಪ್ರಕರಣ: ಕೆ.ಆರ್.ಪುರ ನಿವಾಸಿಯಾದ ಬಾಬು, ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದರು. ಅವರು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ವಾಹನ ಡಿಕ್ಕಿ ಹೊಡೆದಿದ್ದರಿಂದ ತೀವ್ರವಾಗಿ ಗಾಯಗೊಂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಘಟನೆ ನಂತರ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ. ಇದರಿಂದಾಗಿ ವಾಹನದ ಗುರುತು ಪತ್ತೆಯಾಗಿಲ್ಲ ಎಂದು ಕೆ.ಆರ್.ಪುರ ಸಂಚಾರ ಠಾಣೆ ಪೊಲೀಸರು ಹೇಳಿದ್ದಾರೆ. ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry