ಶುಕ್ರವಾರ, ಜನವರಿ 24, 2020
21 °C

ಅಪಘಾತ: ಒಬ್ಬನ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕನಕಪುರ: ಬೆಂಗಳೂರು- ಕನಕಪುರ ರಸ್ತೆಯ ವಳಗೇರಹಳ್ಳಿ ಗೇಟ್ ಬಳಿ ಸೋಮವಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸು ಮತ್ತು ಮಾರುತಿ ಕಾರಿನ ನಡುವೆ ಮುಖಾ ಮುಖಿ ಡಿಕ್ಕಿ ಸಂಭವಿಸಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.ಅಪಘಾತಕ್ಕೆ ಈಡಾಗಿರುವ ಕುಟುಂಬ ಬೆಂಗಳೂರಿನ ಬಾಣಸವಾಡಿ ಪ್ರದೇಶದವರೆಂದು ತಿಳಿದು ಬಂದಿದೆ. ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗೆಗಾಗಿ ನಿಮ್ಹಾನ್ಸ್‌ಗೆ ಕಳಿಸಿಕೊಡಲಾಗಿದೆ.ಒಂದೇ ಕುಟುಂದ 5 ಮಂದಿ ಕಾರಿನಲ್ಲಿ ಕನಕಪುರದ ಕಡೆಗೆ ಪ್ರಯಾಣಿಸುತ್ತಿದ್ದು, ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ಸು ಮುಂದಿನ ವಾಹನವನ್ನು ಹಿಂದಿಕ್ಕಲು ಹೋಗಿ ಈ ದುರ್ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರತಿಕ್ರಿಯಿಸಿ (+)