ಅಪಘಾತ: ಮೂವರ ಸಾವು

7

ಅಪಘಾತ: ಮೂವರ ಸಾವು

Published:
Updated:

ದೊಡ್ಡಬಳ್ಳಾಪುರ: ತಾಲ್ಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಮೂರು ಜನ ಮೃತಪಟ್ಟಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.ಬೈಕಿನಲ್ಲಿ ಹೋಗುತ್ತಿದ್ದ ರವಿ(23), ಶ್ರೀಕಾಂತ್(22) ಎಂಬುವವರು ಲಾರಿಗೆ ಸೈಡ್ ಹೊಡೆಯಲು ಹೋಗಿ ಆಯಾ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಮುಂದಿನಿಂದ ಬರುತ್ತಿದ್ದ ಸಿಮೆಂಟ್ ತುಂಬಿದ ಲಾರಿ ಇಬ್ಬರು ಬೈಕ್ ಸವಾರರ ಮೇಲೆ ಹರದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ನೆಲಮಂಗಲ ತಾಲ್ಲೂಕಿನ ಶಿವಗಂಗೆ ಸಮೀಪದ ಮಲ್ಲಾಪುರ ಗ್ರಾಮದವರು.ಇದೇ ಪೊಲೀಸ್ ಠಾಣೆ ವ್ಯಾಪ್ತಿಯ ಶಾಕಲದೇವನಪುರ ಗ್ರಾಮದ ಬಳಿ ಮಂಗಳವಾರ ಬೆಳಗ್ಗೆ ಸುಮಾರು 10 ಗಂಟೆ ಸಮಯದಲ್ಲಿ ಟೆಂಪೋ ಹಾಗೂ ಬೈಕ್ ಸವಾರರ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಬಿಟಿಎಸ್ ಚಾಲಕ ಹನುಮಂತರಾಜು (32) ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತ ವ್ಯಕ್ತಿ ಹನುಮಂತರಾಜು ಬೆಂಗಳೂರು ಉತ್ತರ ತಾಲ್ಲೂಕಿನ ಹನಿಯೂರು ಗ್ರಾಮದವನು ಎಂದು ಗುರುತಿಸಲಾಗಿದೆ ಎಂದು ದೊಡ್ಡಬೆಳವಂಗಲ ಪೊಲೀಸ್ ಠಾಣೆ ಸನ್‌ಇನ್ಸ್‌ಪೆಕ್ಟರ್ ಡಿ.ಆರ್.ನಾಗರಾಜ್ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry