ಅಪಘಾತ: ಲಾರಿಗೆ ಬೆಂಕಿ

7

ಅಪಘಾತ: ಲಾರಿಗೆ ಬೆಂಕಿ

Published:
Updated:

ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ 4ರ ಕುಣಿಗಲ್ ವೃತ್ತದ ಬಳಿ ಶುಕ್ರವಾರ ರಾತ್ರಿ 10 ಗಂಟೆ ಸುಮಾರಿನಲ್ಲಿ ಎರಡು ಲಾರಿಗಳು ಪರಸ್ಪರ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡು ಒಂದು ಲಾರಿಯಲ್ಲಿದ್ದ ಸುಮಾರು 25 ಲಕ್ಷ ರೂ. ಮೌಲ್ಯದ ವಸ್ತುಗಳು ಭಸ್ಮವಾಗಿವೆ.ಬೆಂಗಳೂರು ಕಡೆಯಿಂದ ಬರುತ್ತಿದ್ದ ವಿಆರ್‌ಎಲ್ ಲಾರಿಗೆ ಕುಣಿಗಲ್ ಕಡೆಯಿಂದ ಬಂದ  ಲಾರಿಯು ಡಿಕ್ಕಿ ಹೊಡೆಯಿತು. ಪರಿಣಾಮ ವಿಆರ್‌ಎಲ್ ಲಾರಿಯು ಮೇಲ್ಸೇತುವೆಯ ತಡೆಗೋಡೆಗೆ ಹೊಡೆದು ಬೆಂಕಿ ಹೊತ್ತಿಕೊಂಡಿತು.ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸುದ್ದಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬಂದು ಬೆಂಕಿಯನ್ನು ನಂದಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry