ಬುಧವಾರ, ನವೆಂಬರ್ 13, 2019
28 °C

ಅಪಘಾತ: ವಾಹನ ಸವಾರ ಸಾವು

Published:
Updated:

ಯಲಹಂಕ: ಕೆಎಸ್‌ಆರ್‌ಟಿಸಿ ಬಸ್ ಮತ್ತು ದ್ವಿಚಕ್ರವಾಹನದ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರನೊಬ್ಬ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ಮುಖ್ಯರಸ್ತೆಯ ಶ್ರೀರಾಮನಹಳ್ಳಿ ಗೇಟ್ ಬಳಿ ಶನಿವಾರ ನಡೆದಿದೆ.ದೊಡ್ಡಬಳ್ಳಾಪುರ ತಾಲ್ಲೂಕು ಜಿಂಕೆ ಬಚ್ಚಹಳ್ಳಿ ಗ್ರಾಮದ ನಿವಾಸಿ ಶಾಮಣ್ಣ ಎಂಬುವರ ಪುತ್ರ ದೇವರ ವಿಗ್ರಹ ತಯಾರಿಸುವ ವೃತ್ತಿ ಮಾಡುತ್ತಿದ್ದ ಪುಟ್ಟರಾಜು (25) ಮೃತಪಟ್ಟವರು.ಸುಮಾರು ಬೆಳಿಗ್ಗೆ 11.30ರ ಹೊತ್ತಿನಲ್ಲಿ ಯಲಹಂಕ ಕಡೆಯಿಂದ ದೊಡ್ಡಬಳ್ಳಾಪುರದ ಕಡೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಪುಟ್ಟರಾಜು ಅವರ ದ್ವಿಚಕ್ರ ವಾಹನಕ್ಕೆ ಎದುರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹೊಡೆಯಿತು. ತೀವ್ರವಾಗಿ ಗಾಯಗೊಂಡ ಪುಟ್ಟರಾಜು ಸ್ಥಳದಲ್ಲೇ ಮೃತಪಟ್ಟರು. ಬಸ್ ಹಾಗೂ ಚಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ರಾಜಾನುಕುಂಟೆ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಪಿ.ಎನ್.ಗಣೇಶ್ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)