ಭಾನುವಾರ, ಮೇ 9, 2021
27 °C

ಅಪಘಾತ: ಸಾವಿನ ಸಂಖ್ಯೆ ಇಳಿಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಳೆದ ವರ್ಷದ ಮೊದಲ ಮೂರು ತಿಂಗಳಿಗೆ ಹೋಲಿಸಿದರೆ, ನಗರದಲ್ಲಿ 2012ನೇ ಸಾಲಿನ ಮೊದಲ ಮೂರು ತಿಂಗಳಲ್ಲಿ ರಸ್ತೆ ಅಪಘಾತದಿಂದ ಸಾವನ್ನಪ್ಪಿದವರ ಸಂಖ್ಯೆ ಇಳಿಮಖವಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಜ್ಯೋತಿ ಪ್ರಕಾಶ್‌ಮಿರ್ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.`2011ರ ಜನವರಿ 1ರಿಂದ ಮಾರ್ಚ್ 31ರ ಮೂರು ತಿಂಗಳ ಅವಧಿಯಲ್ಲಿ 204 ಜನ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಈ ವರ್ಷದ ಜ.1ರಿಂದ ಮಾ.31ರ ಅವಧಿಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 185ಕ್ಕೆ ಇಳಿದಿದೆ ಎಂದು ಅವರು ಹೇಳಿದ್ದಾರೆ.ರಸ್ತೆ ಅಪಘಾತಗಳನ್ನು ನಿಯಂತ್ರಿಸುವುದು ಸಂಚಾರ ಪೊಲೀಸರ ಪ್ರಾಥಮಿಕ ಗುರಿಯಾಗಿದ್ದು, ನಗರ ಸಂಚಾರ ಪೊಲೀಸ್ ವಿಭಾಗವು ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡು ವಾಹನ ಅಪಘಾತಗಳನ್ನು ತಡೆಯಲು ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದು, ವಾಹನ ಸವಾರರು ಸಂಚಾರ ನಿಯಮಗಳನ್ನು ಪಾಲಿಸುವ ಮೂಲಕ ತಮಗೆ ನೆರವಾಗಬೇಕು ಎಂದು ಮಿರ್ಜಿ ಮನವಿ ಮಾಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.