ಅಪಘಾತ: ಸಿ.ಎಂ. ಪತ್ನಿ ಪಾರು

7

ಅಪಘಾತ: ಸಿ.ಎಂ. ಪತ್ನಿ ಪಾರು

Published:
Updated:

ಬೆಳಗಾವಿ: ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರ ಪತ್ನಿ ಶಿಲ್ಪಾ  ಪ್ರಯಾಣಿಸುತ್ತಿದ್ದ ಕಾರಿಗೆ ಹಿಂದಿನಿಂದ ಇನ್ನೊಂದು ಕಾರು ಡಿಕ್ಕಿ ಹೊಡೆದಿದ್ದರಿಂದ ಅವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಬೈಲಹೊಂಗಲ ತಾಲ್ಲೂಕಿನ ಎಂ.ಕೆ. ಹುಬ್ಬಳ್ಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ನಡೆಯಲಿದ್ದ ಕೃಷಿ ಸಚಿವ ಉಮೇಶ ಕತ್ತಿ ಅವರ ಪುತ್ರ ನಿಖಿಲ್ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲು ಶಿಲ್ಪಾ ಶೆಟ್ಟರ್ ಅವರು ಹುಬ್ಬಳ್ಳಿಯಿಂದ ಮುಂಜಾನೆ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಎಂ.ಕೆ. ಹುಬ್ಬಳ್ಳಿ ಬಳಿಯ ತಿರುವಿನಲ್ಲಿ ಕಾರಿನ ಚಾಲಕ ಒಮ್ಮೇಲೆ ಬ್ರೇಕ್ ಹಾಕಿ ವೇಗ ಕಡಿಮೆಗೊಳಿಸಿದಾಗ, ಹಿಂಬದಿಯಿಂದ ವೇಗವಾಗಿ ಬರುತ್ತಿದ್ದ ಇನ್ನೊಂದು ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಶಿಲ್ಪಾ ಶೆಟ್ಟರ್ ಅವರಿಗೆ ತರಚಿದ ಗಾಯಗಳಾಗಿವೆ.`ಶಿಲ್ಪಾ ಶೆಟ್ಟರ್ ಅವರಿಗೆ ಯಾವುದೇ ಗಂಭೀರ ಸ್ವರೂಪದ ಗಾಯಗಳಾಗಿಲ್ಲ. ಅವರ ಆರೋಗ್ಯ ಚೆನ್ನಾಗಿದ್ದು, ಪುನಃ ಪ್ರಯಾಣ ಬೆಳೆಸಿದ್ದಾರೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂದೀಪ ಪಾಟೀಲ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry