ಸೋಮವಾರ, ಜೂನ್ 21, 2021
21 °C

ಅಪಘಾತ: 12 ಮಕ್ಕಳ ದಾರುಣ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್ (ಪಿಟಿಐ/): ಶಾಲಾ ಮಕ್ಕಳಿದ್ದ ಬಸ್ಸೊಂದು ಖಮ್ಮಂ ಜಿಲ್ಲೆಯ ಕಾಲುವೆಗೆ ಉರುಳಿ ಬಿದ್ದ ಪರಿಣಾಮ 12 ಕ್ಕೂ ಅಧಿಕ ಮಕ್ಕಳು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.ಈವರೆಗೂ 12 ಮಕ್ಕಳು ಸಾವನ್ನಪ್ಪಿರುವುದನ್ನು ಪೊಲೀಸರು ಖಚಿತಪಡಿಸಿದ್ದು, ಇನ್ನಷ್ಟು ಮಕ್ಕಳು ಸಾವನ್ನಪ್ಪಿರುವ ಸಾಧ್ಯತೆ ಇದೆ ಎನ್ನಲಾಗಿದೆ.ಬಸ್‌ನಲ್ಲಿ 50 ಮಕ್ಕಳಿದ್ದರು. ಗಾಯಗೊಂಡ ಕೆಲವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.  ಇನ್ನೂ ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ಸದ್ಯಕ್ಕೆ ಕಾಲುವೆಯಲ್ಲಿ ಹೆಚ್ಚಿನ ನೀರಿನ ಹರಿವು ಇಲ್ಲದೇ ಇದ್ದುದರಿಂದ ಯಾವ ಮಕ್ಕಳೂ ಕೊಚ್ಚಿಕೊಂಡು ಹೋಗಿರುವ ಸಾಧ್ಯತೆ ಇಲ್ಲ ಎನ್ನಲಾಗಿದೆ.

ಮಕ್ಕಳೆಲ್ಲಾ ಖಾಸಗಿ ಶಾಲೆಗೆ ಸೇರಿದವರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಕಿರಣ್‌ಕುಮಾರ್ ರೆಡ್ಡಿ ಅವರು ಘಟನೆ ಬಗೆಗೆ ತನಿಖೆಗೆ ಆದೇಶಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.