ಅಪರಾಧಿ ಅಲ್ಲ

7

ಅಪರಾಧಿ ಅಲ್ಲ

Published:
Updated:

ಮಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈಗ ಆರೋಪಿ ಮಾತ್ರ. ಅಪರಾಧಿ ಅಲ್ಲ. ಮುಂಬರುವ ದಿನಗಳಲ್ಲಿ ಅವರು ಆರೋಪಮುಕ್ತರಾಗುತ್ತಾರೆ ಎಂದು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.ಬಿಜೆಪಿ ರಾಷ್ಟ್ರೀಯ ನಾಯಕ ಎಲ್.ಕೆ.ಅಡ್ವಾಣಿ ಜನಚೇತನ ಯಾತ್ರೆಯ ಪೂರ್ವಸಿದ್ಧತೆಗಳನ್ನು ನಗರದಲ್ಲಿ ಶನಿವಾರ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ವಿಧಾನಸಭಾ ಉಪಚುನಾವಣೆಯಲ್ಲಿ ಮಾಜಿ ಸಚಿವ ಶ್ರೀರಾಮುಲು ಅವರಿಗೆ ಟಿಕೆಟ್ ನೀಡುವ ಬಗ್ಗೆ ಚುನಾವಣೆ ಬಂದಾಗ ನೋಡೋಣ. ಪಕ್ಷದ ಮುಖಂಡರು ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry