`ಅಪರಾಧ ತಡೆಗೆ ಮೌಲ್ಯಯುತ ಶಿಕ್ಷಣ ಅಗತ್ಯ'

7
ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್‌ರಾವ್ ಹೇಳಿಕೆ

`ಅಪರಾಧ ತಡೆಗೆ ಮೌಲ್ಯಯುತ ಶಿಕ್ಷಣ ಅಗತ್ಯ'

Published:
Updated:

ಬೆಂಗಳೂರು: `ಮೌಲ್ಯಯುತ ಶಿಕ್ಷಣದಿಂದ ಮಾತ್ರ ದೇಶದಲ್ಲಿ ಹೆಚ್ಚುತ್ತಿರುವ ಅಪರಾಧ ಮತ್ತು ಭ್ರಷ್ಟಾಚಾರವನ್ನು ತಡೆಯಲು ಸಾಧ್ಯ' ಎಂದು ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್‌ರಾವ್ ಹೇಳಿದರು.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಪಾಲಿಕೆಯ ಕೇಂದ್ರ ಕಚೇರಿ ಆವರಣದಲ್ಲಿ ರಥಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು.`ಪ್ರತಿಯೊಬ್ಬರೂ ಸ್ವಾರ್ಥ ಬಿಟ್ಟು ಸಮಾಜದ ಒಳಿತಿಗಾಗಿ ಕೆಲಸ ಮಾಡಬೇಕು. ಜೀವನದಲ್ಲಿ ನೀತಿ ಅಳವಡಿಸಿಕೊಳ್ಳುವ ಮೂಲಕ ನ್ಯಾಯಯುತ ಮಾರ್ಗದಲ್ಲಿ ನಡೆಯಬೇಕು. ಹಾಗಾದಾಗ ಸಮಾಜದಲ್ಲಿ ಅಪರಾಧ, ಭ್ರಷ್ಟಾಚಾರ ಮತ್ತಿತರ ಸಮಸ್ಯೆಗಳು ತಗ್ಗುತ್ತವೆ. ಈ ನಿಟ್ಟಿನಲ್ಲಿ ಶಿಕ್ಷಣದಲ್ಲಿ ಮೌಲ್ಯಗಳನ್ನು ಅಳವಡಿಸಬೇಕಾದ್ದು ಅಗತ್ಯ' ಎಂದರು.ಬಿಬಿಎಂಪಿ ಆಯುಕ್ತ ಎಂ.ಲಕ್ಷ್ಮೀನಾರಾಯಣ ಮಾತನಾಡಿ, `ವಿದ್ಯಾರ್ಥಿಗಳು ಪರೋಪಕಾರ ಗುಣವನ್ನು ಬೆಳೆಸಿಕೊಳ್ಳಬೇಕು.ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಕಳಕಳಿ ಹೆಚ್ಚಾಗಬೇಕು. ಅಮೃತಾನಂದಮಯಿ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಪ್ರವಾಹದ ಸಂದರ್ಭದಲ್ಲಿ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚುವ ಮೂಲಕ ಮಾದರಿ ಕಾರ್ಯ ಮಾಡಿದ್ದಾರೆ. ಈಗ ಸಂಸ್ಥೆಯ ವಿದ್ಯಾರ್ಥಿಗಳು ನಗರದ ಸ್ವಚ್ಛತೆ ಅಭಿಯಾನಕ್ಕೆ ಕೈಜೋಡಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ' ಎಂದು ಹೇಳಿದರು.ಮಾತಾ ಅಮೃತಾನಂದಮಯಿ ಮಠದ ಸ್ವಾಮಿ ಅಮೃತಾಗೀತಾನಂದ ಪುರಿ ಮಾತನಾಡಿ, `ಜೀವನದಲ್ಲಿ ಆಂತರಿಕ ಹಾಗೂ ಬಾಹ್ಯ ಸ್ವಚ್ಛತೆ ಎರಡೂ ಮುಖ್ಯ. ಜನ ತಮ್ಮ ಮನೆಯನ್ನು ಮಾತ್ರ ಸ್ವಚ್ಛವಾಗಿಟ್ಟುಕೊಂಡರೆ ಸಾಲದು. ಇಡೀ ಸಮಾಜವನ್ನು ಸ್ವಚ್ಛವಾಗಿಡಲು ಪ್ರಯತ್ನಸಬೇಕು' ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry