ಮಂಗಳವಾರ, ಮೇ 18, 2021
29 °C

ಅಪರಿಚಿತ ಮಹಿಳೆ ಶವ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಕೋಟೆ: ಪಟ್ಟಣದ ಹೆದ್ದಾರಿ ಸಮೀಪ ಅಪರಿಚಿತ ಮಹಿಳೆಯ ಶವ ಗುರುವಾರ ಪತ್ತೆಯಾಗಿದೆ. ಸುಮಾರು 40 ವರ್ಷ ವಯಸ್ಸಿನ ಶವ ಕೃಶವಾಗಿದ್ದು ಯಾವುದೋ ಕಾಯಿಲೆಯಿಂದ ಸತ್ತಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ಆಕೆ ಅರಿಶಿನ ಬಣ್ಣದ ಜಾಕೀಟು, ಕೇಸರಿ ಬಣ್ಣದ ಸೀರೆ ತೊಟ್ಟಿದ್ದಳು. ಪೊಲೀಸರು ಅಸ್ವಾಭಾವಿಕ ಸಾವು ಮೊಕದ್ದಮೆ ದಾಖಲಿಸಿದ್ದಾರೆ.ಶವವನ್ನು ಎಂವಿಜೆ ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ. ವಾರಸುದಾರರು ಹೊಸಕೋಟೆ ಪೊಲೀಸರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.ವೃದ್ಧರ ಸಾವುಬೆಂಗಳೂರಿನ ನಿಮ್ಹಾನ್ಸ್‌ಗೆ ದಾಖಲಿಸಿದ್ದ ಅಪರಿಚಿತ ವೃದ್ಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾರೆ.ಕಳೆದ ತಿಂಗಳ 28 ರಂದು ಚೀಮಸಂದ್ರ ಬಳಿ ಅಸ್ವಸ್ಥರಾಗಿ ಬಿದ್ದಿದ್ದ ಸುಮಾರು 70 ವರ್ಷದ ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು. ಶವವನ್ನು ಬೌರಿಂಗ್ ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ. ವಾರಸುದಾರರು ಆವಲಹಳ್ಳಿ ಪೊಲೀಸರನ್ನು ಸಂಪರ್ಕಿಸಬಹುದು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.