ಅಪರಿಚಿತ ವಾಹನ ಡಿಕ್ಕಿ: ವ್ಯಕ್ತಿ ಸಾವು

7

ಅಪರಿಚಿತ ವಾಹನ ಡಿಕ್ಕಿ: ವ್ಯಕ್ತಿ ಸಾವು

Published:
Updated:

ಮರಿಯಮ್ಮನಹಳ್ಳಿ: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಸಮೀಪದ ರಾಷ್ಟ್ರೀಯ ಹೆದ್ದಾರಿ 13ರ ಡಣಾಪುರ ಗ್ರಾಮದ ಬಳಿ ಬುಧವಾರ ಸಂಭವಿಸಿದೆ.ಮೃತಪಟ್ಟವನನ್ನು ಪಟ್ಟಣದ ಐದನೇ ವಾರ್ಡ್‌ನ ಮರಡಿ ಸೋಮಪ್ಪ(56) ಎಂದು ಗುರುತಿಸಲಾಗಿದೆ.

ಸೋಮಣ್ಣ ಬೆಳಿಗಿನ ಜಾವ ಸೈಕಲ್ ಮೇಲೆ ಡಣಾಪುರ ಬಳಿಯ ಬಿಎಂಎಂ ಸ್ಪಾಂಜ್ ಐರನ್ ಕಾರ್ಖಾನೆಗೆ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ.ಅಪಘಾತದಲ್ಲಿ ತೀವ್ರ ಗಾಯಗೊಂಡ ಸೋಮಪ್ಪನನ್ನು ಚಿಕಿತ್ಸೆಗಾಗಿ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸ ಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.ಪ್ರಕರಣ ಸ್ಥಳೀಯ ಠಾಣೆಯಲ್ಲಿ ದಾಖಲಾಗಿದ್ದು ತನಿಖೆ ಮುಂದುವರಿದಿದೆ ಎಂದು ಮರಿಯಮ್ಮನಹಳ್ಳಿ ಠಾಣೆ ಪೊಲೀಸ್ ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry