ಅಪೌಷ್ಟಿಕತೆ ನಿವಾರಣೆಗೆ 4 ತಾಲ್ಲೂಕಿನಲ್ಲಿ ಹೊಸ ಅಂಗನವಾಡಿ ಕೇಂದ್ರ

7

ಅಪೌಷ್ಟಿಕತೆ ನಿವಾರಣೆಗೆ 4 ತಾಲ್ಲೂಕಿನಲ್ಲಿ ಹೊಸ ಅಂಗನವಾಡಿ ಕೇಂದ್ರ

Published:
Updated:

ಬೆಂಗಳೂರು: ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಿಸುವ ಉದ್ದೇಶದಿಂದ ನಾಲ್ಕು ತಾಲ್ಲೂಕುಗಳಲ್ಲಿ ಪ್ರಾಯೋಗಿಕವಾಗಿ ಸುಸಜ್ಜಿತ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ರಾಜ್ಯ ಸರ್ಕಾರ ಗುರುವಾರ ಹೈಕೋರ್ಟ್‌ಗೆ ತಿಳಿಸಿದೆ.ಸರ್ಕಾರದ ಪರ ಹಾಜರಾದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಕೆ.ಎಂ. ನಟರಾಜ್, `ಪ್ರತಿ ಅಂಗನವಾಡಿಗೆ 10 ಲಕ್ಷ ರೂಪಾಯಿ ವಿನಿಯೋಗಿಸಲಾಗುತ್ತದೆ. ಬೀದರ್, ದೇವದುರ್ಗ, ರಾಯಚೂರು ಹಾಗೂ ಮೈಸೂರು ತಾಲ್ಲೂಕುಗಳನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಲಾಗಿದೆ. ಇದರ ಹೊರತಾಗಿ, ದೇವದುರ್ಗ ತಾಲ್ಲೂಕಿಗೆ 10 ಕೋಟಿ ರೂಪಾಯಿ ಮೊತ್ತದ ವಿಶೇಷ ಯೋಜನೆ ರೂಪಿಸಲಾಗಿದೆ' ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry