ಗುರುವಾರ , ಫೆಬ್ರವರಿ 25, 2021
29 °C

ಅಫ್ಜಲ್‌ಗುರುಗೆ ನೇಣು ಸಮರ್ಥನೀಯವಲ್ಲ: ಫಾರೂಕ್‌ ಅಬ್ದುಲ್ಲಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಫ್ಜಲ್‌ಗುರುಗೆ ನೇಣು ಸಮರ್ಥನೀಯವಲ್ಲ: ಫಾರೂಕ್‌ ಅಬ್ದುಲ್ಲಾ

ನವದೆಹಲಿ(ಪಿಟಿಐ): ರಾಜೀವ್‌ ಹಂತಕರ ಗಲ್ಲು­ಶಿಕ್ಷೆಯನ್ನು ಸುಪ್ರೀಂ ಕೋರ್ಟ್‌ ಜೀವಾವಧಿಗೆ ಪರಿವರ್ತಿ ಸಿರುವ ತೀರ್ಪಿಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಫಾರೂಕ್ ಅಬ್ದುಲ್ಲಾ, ಸಂಸತ್‌ ಮೇಲಿನ ದಾಳಿಯ ಪ್ರಮುಖ ರೂವಾರಿ ಅಫ್ಜಲ್‌ ಗುರುವಿಗೆ ಗಲ್ಲುಶಿಕ್ಷೆ ನೀಡಿದ್ದನ್ನು ಸಮರ್ಥಿಸಿಕೊಳ್ಳಲಾಗದು ಎಂದು ಹೇಳಿದ್ದಾರೆ.ಅಫ್ಜಲ್‌ ಗುರುವನ್ನು ನೇಣಿಗೇರಿಸುವ ತೀರ್ಮಾನವನ್ನು ಕೈಗೊಳ್ಳುವ ಮೊದಲು ಕೇಂದ್ರ ಸರ್ಕಾರ ತನ್ನ ಪಕ್ಷವನ್ನೇ ಕೇಳಿರಲಿಲ್ಲ ಎಂದು ಅವರು ಹೇಳಿದ್ದಾರೆ. ‘ಅವರು ನಮ್ಮನ್ನು ಕೇಳಲೇ ಇಲ್ಲ.  ಹೇಳಲೂ  ಇಲ್ಲ. ನೇಣಿಗೇರಿಸಿಯೇ ಬಿಟ್ಟರು’ ಎಂದು ಸಂಸತ್‌ ಆವರಣದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.