ಅಭಿಮಾನ್‌ ಸ್ಟುಡಿಯೋದಲ್ಲೇ ನಟ ವಿಷ್ಣುವರ್ಧನ್‌ ಸ್ಮಾರಕ ನಿರ್ಮಿಸಿ

7
ಶಾಸಕ ಎಸ್‌.ಟಿ. ಸೋಮಶೇಖರ್‌ ಆಗ್ರಹ

ಅಭಿಮಾನ್‌ ಸ್ಟುಡಿಯೋದಲ್ಲೇ ನಟ ವಿಷ್ಣುವರ್ಧನ್‌ ಸ್ಮಾರಕ ನಿರ್ಮಿಸಿ

Published:
Updated:

ಬೆಂಗಳೂರು: ಚಿತ್ರನಟ, ದಿವಂಗತ ವಿಷ್ಣುವರ್ಧನ್‌ ಅವರ ಸ್ಮಾರಕವನ್ನು ಅಭಿಮಾನ್‌ ಸ್ಟುಡಿಯೋ ಆವರಣದಲ್ಲೇ ನಿರ್ಮಾಣ ಮಾಡಬೇಕು ಎಂದು ಯಶವಂತಪುರ ಶಾಸಕ ಎಸ್‌.ಟಿ. ಸೋಮಶೇಖರ್‌, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.ಈ ಬಗ್ಗೆ ಸಂಬಂಧಪಟ್ಟವರ ಜೊತೆ ಚರ್ಚೆ ನಡೆಸಿ, ಸ್ಮಾರಕ ನಿರ್ಮಾಣ ಕಾರ್ಯಕ್ಕೆ ಶೀಘ್ರದಲ್ಲೇ ಚಾಲನೆ ನೀಡಬೇಕು. ಕೆಂಗೇರಿ – ಉತ್ತರಹಳ್ಳಿ ಮುಖ್ಯರಸ್ತೆಗೆ ‘ಸಾಹಸಸಿಂಹ ಡಾ. ವಿಷ್ಣುವರ್ಧನ್‌ ರಸ್ತೆ’ ಎಂಬ ನಾಮಕರಣ ಮಾಡಬೇಕೆಂಬ ಒತ್ತಾಯವನ್ನು ಸೋಮಶೇಖರ್‌ ಅವರು ಮುಖ್ಯಮಂತ್ರಿಯವರ ಮುಂದಿಟ್ಟಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry