ಸೋಮವಾರ, ಮೇ 17, 2021
22 °C

ಅಭಿವೃದ್ಧಿಗಾಗಿ ರಾಜ್ಯದಾದ್ಯಂತ ಪ್ರವಾಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಳ್ಳೇಗಾಲ: `ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿ ಮಾಡಲು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವ ಮೂಲಕ ಕ್ರಾಂತಿಕಾರಿ ಬದಲಾವಣೆ ತರುತ್ತೇನೆ~ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.ಉದ್ಬವ್ ಶೈಕ್ಷಣಿಕ ಮತ್ತು ಗ್ರಾಮೀಣಾಭಿವೃದ್ಧಿ ಸ್ವಯಂ ಸೇವಾ ಸಂಸ್ಥೆ ಹಾಗೂ ಕರ್ನಾಟಕ ಆರೋಗ್ಯ ವ್ಯವಸ್ಥೆ ಅಭಿವೃದ್ಧಿ ಮತ್ತು ಸುಧಾರಣಾ ಯೋಜನೆ ಸಹಭಾಗಿತ್ವದಲ್ಲಿ ಇಲ್ಲಿನ ಎಂಜಿಎಸ್‌ವಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಗ್ರಾಮ ಆರೋಗ್ಯ ಮತ್ತು ನೈರ್ಮಲ್ಯ ಸಮಿತಿಗಳ ಹಾಗೂ ಆರೋಗ್ಯ ರಕ್ಷಾ ಸಮಿತಿಗಳ ಜನಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಒಂದು ತಿಂಗಳ ಕಾಲ ನಡೆಸಿಕೊಂಡು ಬಂದ ವ್ರತವನ್ನು ಭಾನುವಾರ ಮಲೆಮಹದೇಶ್ವರ ಬೆಟ್ಟದಲ್ಲಿ ಪೂಜೆ ಸಲ್ಲಿಸುವ ಮೂಲಕ ಪೂರ್ಣಗೊಳಿಸಿದ್ದೇನೆ. ಈ ಮಹತ್ವಪೂರ್ಣ ಸರ್ಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮೌನವ್ರತ ಮುಗಿಸಿದ್ದೇನೆ. ತಾವು ಕೇವಲ ಕುರ್ಚಿಗಾಗಿ ಅಂಟಿಕೊಳ್ಳುವ ವ್ಯಕ್ತಿಯಲ್ಲ. ಅಧಿಕಾರ ಇಲ್ಲದಿದ್ದರೂ ರಾಜ್ಯದಾದ್ಯಂತ ಪ್ರವಾಸ ಮಾಡಿ ಅಭಿವೃದ್ಧಿಗೆ ಕಾರ್ಯಗಳಲ್ಲಿ ತೊಡಗುತ್ತೇನೆ ಎಂದು ನುಡಿದರು.ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಿಂದ ನಾವು ಸ್ಪರ್ಧಿಸಬೇಕು ಹೇಳಿಕೆಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.

ಉದ್ಬವ್ ಸಂಸ್ಥೆಯ ಅಪರೂಪದ ಈ ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳು ಸಹಕಾರ ನೀಡಬೇಕು. ಈ ಯೋಜನೆ ಇಡೀ ರಾಜ್ಯದಲ್ಲಿ ನಡೆಯುವಂತೆ ಮಾಡಲು ಮುಖ್ಯಮಂತ್ರಿಗಳ ಜತೆ ಸಮಾಲೋಚನೆ ನಡೆಸಲಾಗುತ್ತದೆ. ಶಿವಮೊಗ್ಗ ಜಿಲ್ಲೆಯಲ್ಲೂ ಈ ಯೋಜನೆ ಅನುಷ್ಠಾನಕ್ಕೆ ಸಂಸ್ಥೆಯ ಪದಾಧಿಕಾರಿ ಗಳು ಮುಂದಾಗಬೇಕು ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.