ಅಭಿವೃದ್ಧಿಗೆ ರಾಜಕಾರಣ ತೊಡಕು ಬೇಡ

7

ಅಭಿವೃದ್ಧಿಗೆ ರಾಜಕಾರಣ ತೊಡಕು ಬೇಡ

Published:
Updated:

ಮಾಲೂರು:  ರಾಜಕೀಯ ಚುನಾವಣೆಗೆ ಮಾತ್ರ ಸೀಮಿತವಾಗಬೇಕು. ಅಭಿವೃದ್ಧಿಗೆ ಎಂದೂ ತೊಡಕಾಗಬಾರದು ಎಂದು ನೊಸಗೆರೆ ಗ್ರಾ.ಪಂ ಅಧ್ಯಕ್ಷ ಕೆ.ಎಂ. ಅಶೋಕ್‌ಕುಮಾರ್ ತಿಳಿಸಿದರು.ತಾಲ್ಲೂಕಿನ ಮಾರಸಂದ್ರ ಗ್ರಾಮದಲ್ಲಿ ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ  ಯೋಜನೆಯಡಿ 1.50 ಲಕ್ಷ ರೂಪಾಯಿ ವೆಚ್ಚದಲ್ಲಿ ಹಮ್ಮಿಕೊಂಡಿದ್ದ ತಡೆ ಕಾಲುವೆ ಕಾಮಗಾರಿಗೆ ಈಚೆಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಗ್ರಾಮೀಣ ಭಾಗದ ಜನರ ಅಭಿವೃದ್ಧಿಗೆ ಮಂಜೂರಾಗುವ ಯೋಜನೆಗಳಿಗೆ ಬಿಡುಗಡೆಯಾಗುವ ಹಣವನ್ನು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸಮರ್ಪಕವಾಗಿ ವಿನಿಯೋಗಿಸುವ ಮುಖಾಂತರ ಹಳ್ಳಿಗಳ ಅಭಿವೃದ್ಧಿಗೆ ಮುಂದಾಗಬೇಕು ಎಂದರು.ನೊಸಗೆರೆ ಗ್ರಾ.ಪಂ ಉಪಾಧ್ಯಕ್ಷೆ ಪಾರ್ವತಮ್ಮ ಚಿನ್ನಸ್ವಾಮಿಗೌಡ ಮಾತನಾಡಿದರು. ತಾ.ಪಂ. ಸದಸ್ಯ ಪುಟ್ಟಸ್ವಾಮಿ, ಗ್ರಾ.ಪಂ ಸದಸ್ಯರಾದ ಕೆ.ವೆಂಕಟೇಶಪ್ಪ, ಸಿ.ಎಂ.ನಾರಾಯಣಸ್ವಾಮಿ, ಲಕ್ಷ್ಮಮ್ಮ ಕುಮಾರ್, ಕಾರ್ಯದರ್ಶಿ ಕಿಶೋರ್ ಕುಮಾರ್, ಬಿಲ್ ಕಲೆಕ್ಟರ್ ಟಿ.ವಿ. ನಾಗೇಶ್, ಎನ್‌ಆರ್‌ಇಜಿ  ರೆಡ್ಡಿ, ಮುಖಂಡರಾದ ಮುನಿಕೃಷ್ಣಪ್ಪ, ಮುನಿರಾಜು, ನಂಜುಂಡಪ್ಪ, ಮಂಜುನಾಥ್ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry